ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ.
ಆದರೆ, ಅವರ ಸಾವಿನ ಸುದ್ದಿಯನ್ನು ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. 71 ವರ್ಷದ ಶಿವರಾಮ್ ಅವರನ್ನು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಶಿವರಾಮ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಅವರ ಪತ್ನಿ ಬಂದು ಕಣ್ಣೀರು ಹಾಕಿದ್ದಾರೆ. ಪತಿಯ ಪಾರ್ಥಿವ ಶರೀರ ಕಂಡು ಗೋಳಾಡಿದ್ದಾರೆ. ಶಿವರಾಮ್ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಆನಂತರ ಅವರ ಮೆದುಳು ಕೂಡ ಕಾರ್ಯ ನಿಲ್ಲಿಸಿತ್ತು.