Belgaum | ಚಿತ್ರನಟ ಶಿವರಂಜನ್ ಬೋಳಣ್ಣವರ್ ಮೇಲೆ ಗುಂಡಿನ ದಾಳಿ
ಬೆಳಗಾವಿ : ಚಿತ್ರನಟ ಶಿವರಂಜನ್ ಬೋಳ್ಳಣ್ಣವರ್ ಮೇಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಗುಂಡಿನ ದಾಳಿ ನಡೆದಿದೆ.
ಅದೃಷ್ಟವಶಾತ್ ಪ್ರಾಣಾಪಾಯದಿಂದ ಶಿವರಂಜನ್ ಪಾರಾಗಿದ್ದಾರೆ.
ಉದ್ಯಮಿಯಾಗಿರುವ ಶಿವರಂಜನ್ ಬೋಳಣ್ಣವರ್ ಅಮೃತ ಸಿಂಧು ಚಿತ್ರದಲ್ಲಿ ನಟಿಸಿದ್ದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಹಳೆ ಹಣಮಂತ ದೇವಸ್ಥಾನ ಬಳಿ ಗುಂಡಿನ ದಾಳಿ ನಡೆದಿತ್ತು.
ಬೈಕ್ ಮೇಲೆ ಬಂದು ಇಬ್ಬರು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಇನ್ನು ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸದ್ಯ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.