ದಿನೇ ದಿನೇ ಹೊಸ ಹೊಸ ತಿರುವುಗಳಿಂದ ವಿಭಿನ್ನ ದಿಕ್ಕಿನೆಡೆಗೆ ಸಾಗುತ್ತಿರುವ ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಸೇನೆ ನಾಯಕ ಸಂಜಯ್ ರಾವತ್ ನೀಡಿರುವ ಹೇಳಿಕೆ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದರೆ, ಮತ್ತೊಂದೆಡೆ ಸುಶಾಮತ್ ಅಭಿಮಾನಿಗಳು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತಾಗಿ ಮಾತನಾಡಿರುವ ಸಂಜಯ್ ರಾವತ್ ಪ್ರಕರಣಕ್ಕೆ ಸುಖಾಸುಮ್ಮನೆ ರಾಜಕೀಯ ಬಣ್ಣ ಹಚ್ಚಲಾಗುತ್ತಿದೆ. ಆದರೆ ಸುಶಾಂತ್ ಹಾಗೂ ತಂದೆಯ ನಡುವಿನ ಸಂಬಂಧ ಉತ್ತಮವಾಗಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. ತಂದೆ ಎರಡನೇ ಮದುವೆ ಮಾಡಿಕೊಂಡ ವಿಚಾರ ಸುಸಾಂತ್ ಗೆ ಇಷ್ಟವಿರಲಿಲ್ಲ. ಅವರಿಬ್ಬರ ನಡುವೆ ಉತ್ತಮ ಬಾಂಧವ್ಯವಿರಲಿಲ್ಲ ಎಂದಿದ್ದಾರೆ ರಾವತ್. 
ಅಲ್ಲದೇ ಇನ್ನೂ ಮುಂದುವರೆದು ಮಾತನಾಡಿರುವ ಅವರು ಪಟ್ನಾದಲ್ಲಿರುವ ಅವರ ಮನೆಗೆ ಸುಶಾಂತ್ ಎಷ್ಟು ಬಾರಿ ಭೇಟಿ ನೀಡಿದ್ದಾರೆ. ಅಂಕಿತಾ ಲೋಖಂಡೆ ಹಾಗೂ ಸುಶಾಂತ್ ನಡುವಿನ ಸಂಬಂಧ ಮುರಿದುಬೀಳಲು ಕಾರಣವೇನು ಎಂದು ಪ್ರಶ್ನಿಸಿ ಇದೀಗ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಬಗ್ಗೆ ಸುಶಾಂತ್ ಸಂಬಂಧಿಯೇ ಆದ ಬಿಜೆಪಿ ಶಾಸಕರಾದ ನೀರಜ್ ಕುಮಾರ್ ಅವರು ರಾವತ್ ಅವರ ವಿರುದ್ಧ ಕಿಡಿಕಾರಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲ ಕ್ಷಮೆಯಾಚಿಸದ ಪಕ್ಷದಲ್ಲಿ ಮಾನನಷ್ಟ ಮೊಕದ್ದಮೆ ಹುಡುವುದಾಗಿ ಎಚ್ಚರಿಸಿದ್ದಾರೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








