ಮಳೆಗೆ ಬೆಳೆ ಕಳೆದುಕೊಂಡಿರುವ ರೈತರಿಗೆ ಶೀಘ್ರದಲ್ಲೇ ಪರಿಹಾರ : ಶೋಭಾ Shobha karandlaje saaksha tv
ಮೈಸೂರು : ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಶೀಘ್ರದಲ್ಲೇ ಪರಿಹಾರ ನೀಡಲು ಕೇಂದ್ರ ಚಿಂತನೆ ನಡೆಸಿರುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಶೋಭಾ ಕರಂದ್ಲಾಜೆ ಅವರು ಇಂದು ಕೇದಾರನಾಥದಲ್ಲಿ ಅನಾವರಣಗೊಂಡಿರುವ ಶಂಕರಾಚಾರ್ಯರ ಬೃಹತ್ ಪ್ರತಿಮೆಯ ಸೃಷ್ಟಿಕರ್ತ, ಶಿಲ್ಪಿ ಅರುಣ್ ಯೋಗಿರಾಜ್ ನಿವಾಸಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾನತಾಡಿ ಅವರು, ಅರುಣ್ ಯೋಗಿರಾಜ್ ಕೈಚಳಕದ ಶಂಕರಾಚಾರ್ಯ ಮೂರ್ತಿ ಕೆತ್ತನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ರೈತರಿಗೆ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿ, ಮಳೆ ಹೆಚ್ಚಾದ ರಾಜ್ಯಗಳಲ್ಲಿ ಆಯಾ ರಾಜ್ಯ ಸರ್ಕಾರಗಳು ಬೆಳೆ ನಾಶದ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ರಾಜ್ಯ ಸರ್ಕಾರಗಳು ವರದಿ ನೀಡುತ್ತಿದ್ದಂತೆ ಕೇಂದ್ರ ಸರ್ಕಾರ ತಕ್ಷಣವೇ ಪರಿಹಾರ ನೀಡಲಿದೆ ಎಂದು ಮಾಹಿತಿ ನೀಡಿದರು.