ರೈತರ ಆದಾಯವನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತೇನೆ : ಶೋಭಾ ಕರಂದ್ಲಾಜೆ shobha karandlaje saaksha tv
ತುಮಕೂರು : ರೈತರ ಆದಾಯವನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಸಿದ್ದಗಂಗಾಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಸಣ್ಣ ಮತ್ತು ಮಧ್ಯಮ ಮಟ್ಟದ ರೈತರ ಅನೂಕೂಲಕ್ಕಾಗಿ ಕೇಂದ್ರ ಸರ್ಕಾರ ಹಲವು ಯೋಜನೆ ಜಾರಿಗೆ ತಂದಿದೆ. ಇದನ್ನೂ ಸಹದುಪಯೋಗ ಪಡಿಸಿಕೊಳ್ಳುವಂತೆ ರೈತರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಇನ್ನು ನೀರಾವರಿ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನ ಮಾಡುತ್ತೇನೆ. ರಾಜ್ಯ ಸರ್ಕಾರದ ಜೊತೆಗಿದ್ದು ಕೇಂದ್ರದ ಯೋಜನೆಗಳನ್ನು ಹಳ್ಳಿಯ ಕಡೆ ರೈತರಿಗೆ ತಲುಪಿಸುವ ಪ್ರಯತ್ನವನ್ನು ಪ್ರಮಾಣಿಕವಾಗಿ ಮಾಡುತ್ತೇನೆ. ಸಚಿವ ಬಿ.ಸಿ ಪಾಟೀಲ್ ಜೊತೆ ಮಾತಾನಾಡಿದ್ದೇನೆ. ಅಧಿಕಾರಿಗಳ ಜೊತೆ ಸಭೆ ಮಾಡಿ ಜಿಲ್ಲಾವಾರು ರೈತರ ಸಮಸ್ಯೆಯನ್ನು ಪರಿಹರಿಸಿವಂತೆ ಕೆಲಸ ಮಾಡುತ್ತೇನೆ.
ರೈತರ ಆದಾಯವನ್ನು ಹೆಚ್ಚಿಸುವಂತೆ ಕೆಲಸ ಮಾಡುತ್ತೇನೆ ಎಂದರು.









