ಟೀಂ ಇಂಡಿಯಾಗೆ ಆಘಾತ | ಏಕದಿನ ಸರಣಿಯಿಂದ ವಿರಾಟ್ ದೂರ Virat saaksha tv
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಭಾರೀ ಆಘಾತ ಎದುರಾಗುವ ಸಾಧ್ಯತೆ ಇದೆ.
ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ಬೆನ್ನುನೋವಿನಿಂದಾಗಿ ಕೊಹ್ಲಿ ಎರಡನೇ ಟೆಸ್ಟ್ ಪಂದ್ಯದಿಂದ ಕೊನೆಯ ನಿಮಿಷದಲ್ಲಿ ವಿರಾಟ್ ಕ್ಯಾಪ್ಟನ್ ಕ್ಯಾಪ್ ಅನ್ನು ರಾಹುಲ್ ಗೆ ನೀಡಿದರು.
ಟಾಸ್ ವೇಳೆ ಮಾತನಾಡಿದ ರಾಹುಲ್, ಕೊಹ್ಲಿ ಸದ್ಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಇತ್ತ ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣಗಳಿಂದ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿತ್ತು.
ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಪ್ರಕಟಿಸಿದ ತಂಡದಲ್ಲಿ ಕೊಹ್ಲಿಗೆ ಸ್ಥಾನ ದೊರಕಿದೆ.
ಆದ್ರೆ ಇದೀಗ ಬೆನ್ನು ನೋವಿನಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಸರಣಿಗೆ ಲಭ್ಯವಾಗುವುದು ಅನುಮಾನ ಎಂದು ಹೇಳಲಾಗುತ್ತಿದೆ.
ಟೀಂ ಇಂಡಿಯಾ ಸೀಮಿತ ಓವರ್‌ಗಳ ನಾಯಕ ರೋಹತ್ ಶರ್ಮಾ ಕೂಡ ಗಾಯದ ಸಮಸ್ಯೆಯಿಂದ ದೂರ ಉಳಿದಿದ್ದಾರೆ.
ಇನ್ನು ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯ ಜನವರಿ 19 ರಂದು ನಡೆಯಲಿದೆ.
ಭಾರತ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾಂತ್ ಕಿಶನ್, ವಾಷಿಂಗ್ ಟನ್ ಸುಂದರ್, ಚಹಾಲ್, ರವಿಚಂದ್ರನ್ ಅಶ್ವಿನ್, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್,ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್