ಬೆಂಗಳೂರು: ನಗರದಲ್ಲಿನ ಬ್ಯಾಂಕ್ ಸಿಬ್ಬಂದಿಗಳಿಗೆ ಇಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ.
ಸಿಟಿಯಲ್ಲಿ (Silicon City) ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಿಂದ ದಾಳಿ ನಡೆಸಿದ್ದು, ರಾಷ್ಟ್ರೀಕೃತ ಬ್ಯಾಂಕ್ (Nationalized Bank) ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆಸಿದ್ದಾರೆ. ಎರಡನೇ ಬಾರಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಪ್ರದೇಶಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ, ಅಗತ್ಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ (Delhi) ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ಕೂಡ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.