ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಪ್ರದೇಶದಲ್ಲಿ ಕಾಶ್ಮೀರಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಆಘಾತಕಾರಿ ಆರೋಪಗಳು ಹೊರಬಿದ್ದಿವೆ. ಪಾಕಿಸ್ತಾನದ ಧರ್ಮಗುರು ಮುಪ್ತಿ ಸಯೀದ್ ಖಾನ್ ಅವರ ಹೇಳಿಕೆಗಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅವರ ಪ್ರಕಾರ, ಪಾಕಿಸ್ತಾನದಿಂದ ನುಸುಳುತ್ತಿರುವ ಉಗ್ರರು ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಅಸಹಾಯಕ ಮಹಿಳೆಯರು ಹಾಗೂ ಬಾಲಕಿಯರನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಆಹಾರಕ್ಕಾಗಿ ಹೋರಾಡುತ್ತಿರುವ ಈ ಮಹಿಳೆಯರು ತಿನ್ನಲು ರೊಟ್ಟಿ ಪಡೆಯಲು ಕೂಡ ಇಂತಹ ದುಸ್ಥಿತಿಯನ್ನು ಎದುರಿಸಬೇಕಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಘಟನೆಗಳು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ಜೊತೆಗೆ, ಈ ಹೇಳಿಕೆಗಳ ಮೂಲಕ ಪಾಕಿಸ್ತಾನದಿಂದ ಉಗ್ರರ ನುಸುಳುವಿಕೆ ನಡೆಯುತ್ತಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ ಎಂದು ಗುಪ್ತಚರ ವಲಯಗಳು ವಿಶ್ಲೇಷಿಸಿವೆ.
ಈ ವಿಚಾರದ ಕುರಿತು ಇನ್ನಷ್ಟು ತನಿಖೆ ಮತ್ತು ಅಧಿಕೃತ ಪ್ರತಿಕ್ರಿಯೆಗಾಗಿ ಕಾದು ನೋಡಲಾಗುತ್ತಿದೆ.







