ದೆಹಲಿ: ಗುಂಡಿನ ದಾಳಿ ನಡೆದ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ದೆಹಲಿಯ ನಜಾಫಗಢದಲ್ಲಿ ನಡೆದಿದೆ.
ಇಲ್ಲಿಯ ಸಲೂನ್ ನಲ್ಲಿ ಗುಂಡಿನ ದಾಳಿ ನಡೆದಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಯುವಕನ ಮೇಲೆ ಗುಂಡು ಹಾರಿಸುತ್ತಿರುವುದು ಕಂಡು ಬಂದಿದೆ.
ಸೋನು ಮತ್ತು ಆಶಿಶ್ ಎಂಬ ಯುವಕರು ಗುಂಡು ತಗುಲಿ ಸಾವನ್ನಪ್ಪಿದ್ದಾರೆ.ಈ ಕುರಿತು ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.