ಕೊರೊನಾ ವೈರಸ್ ಸೋಂಕಿನಿಂದಾಗಿ ಸ್ಥಗಿತಗೊಂಡಿದ್ದ ಸಿನಮಾ ಶೂಟಿಂಗ್ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆ ನಟ ಶ್ರೀ ಮಹಾದೇವ್ ಹಾಗೂ ಆದಿತಿ ಪ್ರಭುದೇವ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಗಜಾನನ ಅಂಡ್ ಗ್ಯಾಂಗ್ ಸಿನಿಮಾದ ಶೂಟಿಂಗ್ ಅಕ್ಟೋಬರ್ ನಿಂದ ಶುರುವಾಗಲಿದೆ.
ನಮ್ ಗಣಿ ಬಿಕಾಂ ಪಾಸ್ ನಿರ್ದೇಶಕ ಅಭಿಷೇಕ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶಿಸುತ್ತಿದ್ದು ನಿರ್ಮಾಪಕ ನಾಗೇಶ್ ಕುಮಾರ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನುಳಿದಂತೆ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ಸಂಯೋಜಿಸುತ್ತಿದ್ದು,ಉದಯ್ ಲೀಲಾ ಅವರ ಛಾಯಾಗ್ರಹಣವಿದೆ.
ಇದೊಂದು ಪ್ಯೂರ್ ಕಾಲೇಜ್ ಕಂಟೆಂಟ್ ಓರಿಯೆಂಟೆಡ್ ಸಿನಿಮಾ ಆಗಿದ್ದು, ಚಿತ್ರದಲ್ಲಿ ಆದಿತಿ ಪ್ರಭುದೇವ ಅವರು ಕಾಲೇಜು ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.









