ಹಾಸನ : ನವಜಾತ ಶಿಶುಗಳಿದ್ದ (Infant) ಜಿಲ್ಲಾಸ್ಪತ್ರೆಯ (District Hospital) ಐಸಿಯು (ICU) ವಾರ್ಡ್ನಲ್ಲಿ ಶಾರ್ಟ್ಸರ್ಕ್ಯೂಟ್ (Short Circuit) ಉಂಟಗಿದ್ದು, ದೇವರ ದಯೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಈ ಘಟನೆ ಹಾಸನದಲ್ಲಿ ನಡೆದಿದ್ದು, ಘಟನೆಯಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾರ್ಟ್ ಸರ್ಕ್ಯೂಟ್ ಆಗುತ್ತಿದ್ದಂತೆ ಐಸಿಯುನಲ್ಲಿದ್ದ 24 ನವಜಾತ ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಣೆಯೊಳಗೆ ಹೊಗೆ ತುಂಬಿಕೊಂಡಿದ್ದು, ಆಸ್ಪತ್ರೆ ಸಿಬ್ಬಂದಿ ಕಿಟಕಿ ಗಾಜುಗಳನ್ನು ಒಡೆದು ಮಕ್ಕಳನ್ನು ರಕ್ಷಿಸಿದ್ದಾರೆ. ಐಸಿಯುನಿಂದ ಮಕ್ಕಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ ನಂತರ ನವಜಾತ ಶಿಶುಗಳ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.
ಐಸಿಯುನಲ್ಲಿ 24 ನವಜಾತ ಶಿಶುಗಳಿದ್ದು, ಎಲ್ಲ ಶಿಶುಗಳು ಪ್ರಾಣಾಪಾಯದಿಂದ ಪಾರಾಗಿ ಸುರಕ್ಷಿತವಾಗಿದ್ದಾರೆ. ಸ್ಥಳಕ್ಕೆ ಹಿಮ್ಸ್ನ ನಿರ್ದೇಶಕ ರವಿಕುಮಾರ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








