ವಾಷಿಂಗ್ಟನ್: ಶಾಲೆಯಲ್ಲಿ ವಿದ್ಯಾರ್ಥಿ ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಬಲಿಯಾಗಿರುವ ಘಟನೆ ನಡೆದಿದೆ.
ಅಮೆರಿಕದ (America) ಜಾರ್ಜಿಯಾ ರಾಜ್ಯದಲ್ಲಿ ಈ ಘಟನೆ ನಡೆದಿದೆ. ಅಮೆರಿಕದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ, 9 ಜನ ಗಾಯಗೊಂಡಿದ್ದಾರೆ.
ಸದ್ಯ ಶಂಕಿತ ಬಂದೂಕುಧಾರಿ ಬಂಧನದಲ್ಲಿದ್ದಾನೆ ಎನ್ನಲಾಗಿದೆ. ಜಾರ್ಜಿಯಾದ ವಿಂಡರ್‌ನಲ್ಲಿರುವ ಅಪಾಲಾಚಿ ಹೈಸ್ಕೂಲ್ ನ ಕೋಲ್ಟ್ ಕ್ರೇ (14) ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿ ಎನ್ನಲಾಗಿದೆ. ಘಟನೆಯಲ್ಲಿ ಈತ ಇಬ್ಬರು ಶಿಕ್ಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳನ್ನು ಬಲಿ ಪಡೆದಿದ್ದಾನೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಕನಿಷ್ಠ 385 ಜನರು ಸಾಮೂಹಿಕ ಗುಂಡಿನ ದಾಳಿಗಳಿಗೆ ಒಳಗಾಗಿದ್ದಾರೆ. ಅಮೆರಿಕದಲ್ಲಿ ಪ್ರತಿದಿನ ಸರಾಸರಿ 1.5 ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಗುಂಡಿನ ದಾಳಿ ನಡೆಸುತ್ತಿರುವುದಕ್ಕೆ ಆತಂಕ ಮನೆ ಮಾಡುತ್ತಿದೆ.