Shraddha murder case :ಶ್ರದ್ಧಾ ಕೊಲೆ ಕೇಸ್ – ಅಪರಾಧಿಗೆ ಅತ್ಯಂತ ಕಠಿಣ ಶಿಕ್ಷೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ರದ್ಧಾ ವಾಲ್ಕರ್ ಕೊಲೆ ಕೇಸ್ ನಲ್ಲಿ ಅಪರಾಧಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ನ್ಯಾಯಾಲಯ ವಿಧಿಸಲಿದೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಮತಾಂತರದ ವಿರುದ್ಧ ಕಠಿಣ ಕಾನೂನುಗಳನ್ನು ಹೊಂದಿದ್ದು, ಕೊಲೆ ಪ್ರಕರಣದಲ್ಲಿ ಯಾರೇ ಜವಾಬ್ದಾರರಾಗಿದ್ದರೂ ಅವರಿಗೆ ಶೀಘ್ರದಲ್ಲೇ ಶಿಕ್ಷೆಯಾಗಲಿದೆ. ಈ ಪ್ರಕರಣದ ಬಗ್ಗೆ ಸ್ವತಃ ನಾನೇ ನಿಗಾ ವಹಿಸುತ್ತಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮತಾಂತರದ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ತರಲು ಶ್ರದ್ಧಾ ಕೊಲೆ ಕೇಸ್ ಸೂಕ್ಷ್ಮ ಘಟನೆಯಾಗಿದೆ ಎಂದು ಅಮಿತ್ ಶಾ ಅಭಿಪ್ರಾಯ ಪಟ್ಟಿದ್ದಾರೆ.
ಅಫ್ತಾಬ್ ಪೂನವಾಲಾ ಎಂಬಾತ ಮುಂಬೈ ಮೂಲದ 26 ವರ್ಷದ ಶ್ರದ್ಧಾ ವಾಲ್ಕರ್ ಎಂಬ ತನ್ನ ಪ್ರೇಯಸಿಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಮೂರು ವಾರಗಳ ಕಾಲ ಫ್ರಿಡ್ಜ್ನಲ್ಲಿಟ್ಟು, ಅನೇಕ ಪ್ರದೇಶಗಳಲ್ಲಿ ಹಲವು ದಿನಗಳ ಕಾಲ ಬಿಡಿ ಬಿಡಿಯಾಗಿ ಎಸೆದಿದ್ದ. ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ತಾಬ್ನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
shraddha-murder-case-shraddha-murder-case-the-most-severe-punishment-for-the-criminal