ಹೈಕಮಾಂಡ್ ಟಿಕೆಟ್ ಕೊಟ್ಟರೇ ಚುನಾವಣೆಯಲ್ಲಿ ಸ್ಪರ್ಧೆ: ಶ್ರದ್ಧಾ ಶೆಟ್ಟರ್

1 min read
by-election

ಹೈಕಮಾಂಡ್ ಟಿಕೆಟ್ ಕೊಟ್ಟರೇ ಚುನಾವಣೆಯಲ್ಲಿ ಸ್ಪರ್ಧೆ: ಶ್ರದ್ಧಾ ಶೆಟ್ಟರ್

ಬೆಳಗಾವಿ : ರಾಜ್ಯ ಬಿಜೆಪಿಯಲ್ಲಿ ಬೆಳಗಾವಿ ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು,

ಹೈ ಕಮಾಂಡ್ ಟಿಕೆಟ್ ನೀಡಿದರೇ ಸ್ಪರ್ಧೆ ಮಾಡುವುದಾಗಿ ದಿ.ಸುರೇಶ್ ಅಂಗಡಿ ಪುತ್ರಿ, ಜಗದೀಶ್ ಶೆಟ್ಟರ್ ಸೊಸೆ ಶ್ರದ್ಧಾ ಶೆಟ್ಟರ್ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ ಉಪಚುನಾವಣೆ ಬಗ್ಗೆ ಮಾತನಾಡಿದ ಶ್ರದ್ಧಾ ಶೆಟ್ಟರ್, ಬೆಳಗಾವಿ ಲೋಕಸಬಾ ಚುಣಾವಣೆಯಲ್ಲಿ ಸ್ಪರ್ಧಿಲುಸಲು ಮಾನಸಿಕವಾಗಿ ಸಿದ್ಧರಿದ್ದೇವೆ.

by-election

ನಮ್ಮ ಕುಟುಂಬಕ್ಕೆ ಟಿಕೆಟ್ ನೀಡುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲೂ ಚರ್ಚೆಯಾಗಿದೆ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು.

ಹೈಕಮಾಂಡ್ ನಿರ್ಧಾರವೇ ಅಂತಿಮ. ಚುನಾವಣೆಗೆ ಸ್ಪರ್ಧಿಸಬೇಕೆಂದು ಅಭಿಮಾನಿಗಳ ಒತ್ತಾಯ ಇದೆ ಎಂದು ತಿಳಿಸಿದ್ದಾರೆ.

ಇನ್ನು ಹೈಕಮಾಂಡ್ ಅಥವಾ ಪಕ್ಷದ ವರಿಷ್ಠರು ಇನ್ನೂ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ, ಟಿಕೆಟ್ ಬಗ್ಗೆ ಏನೂ ಚರ್ಚೆ ಆಗಿಲ್ಲ.

ಕುಟುಂಬಕ್ಕೆ ಅವಕಾಶ ಕೊಟ್ಟರೆ ಸ್ಪರ್ಧೆ ಮಾಡುತ್ತೇವೆ ಎಂದು ತಿಳಿಸಿದ್ದೇವೆ. ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದರು.

chinthamani
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd