Shreyas Iyer IPL 2022 : ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಅಯ್ಯರ್ ಕ್ಯಾಪ್ಟನ್
ಕೊರೊನಾ ಮೂರನೇ ಅಲೆಯ ನಡುವೆ ಮುಂದಿನ ಐಪಿಎಲ್ ಗಾಗಿ ತೆರೆ ಮೆರೆಯಲ್ಲಿ ಸಿದ್ಧತೆ ನಡೆಯುತ್ತಿದೆ.
15 ನೇ ಆವೃತ್ತಿಗೆ ಹೊಸದಾಗಿ ಎರಡು ತಂಡಗಳು ಸೇರ್ಪಡೆಗೊಳ್ಳಲಿದ್ದು, ಮಿಲಿಯನ್ ಡಾಲರ್ ಟೂರ್ನಿ ಮತ್ತಷ್ಟು ರೋಚಕತೆ ಪಡೆದುಕೊಳ್ಳಲಿದೆ.
ಈ ತಂಡಗಳ ಕ್ಯಾಪ್ಟನ್ ಗಳ ಬಗ್ಗೆ ಸಾಕಷ್ಟು ದಿನಗಳಿಂದ ಚರ್ಚೆಗಳು ನಡೆಯುತ್ತಲೇ ಇವೆ.
ಮುಖ್ಯವಾಗಿ ಅಹಮದಾಬಾದ್ ತಂಡದ ನಾಯಕರಾಗಿ ಯುವ ಬ್ಯಾಟರ್ ಶ್ರೇಯಸ್ ಅಯ್ಯರ್ ಫೈನಲ್ ಆಗಿದ್ದು, 15 ಕೋಟಿಗೆ ಡೀಲ್ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿತ್ತು.
ಆದ್ರೆ ಕ್ಷಿಪ್ರ ಬೆಳವಣಿಗೆಯಲ್ಲಿ ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯರತ್ತ ಅಹಮದಾಬಾದ್ ಫ್ರಾಂಚೈಸಿ ಮುಖಮಾಡಿದೆ ಎಂದು ವರದಿಯಾಗಿದೆ.
ಈ ಹಿನ್ನೆಲೆಯಲ್ಲಿ ಅಯ್ಯರ್ ಗೆ ಸಂಬಂಧಿಸಿದ ಮತ್ತೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶ್ರೇಯಸ್ ಅಯ್ಯರ್ ಮುಂದಿನ ಐಪಿಎಲ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಕಳೆದ ಋತುವಿನಲ್ಲಿ ಕೆಕೆಆರ್ ನಾಯಕರಾಗಿದ್ದ ಇಯಾನ್ ಮಾರ್ಗನ್ ಅವರನ್ನು ಫ್ರಾಂಚೈಸಿ ಉಳಿಸಿಕೊಂಡಿಲ್ಲ.
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಕೆಕೆಆರ್ ಮ್ಯಾನೇಜ್ಮೆಂಟ್ ಅಯ್ಯರ್ ಗೆ ನಾಯಕತ್ವವನ್ನು ಹಸ್ತಾಂತರಿಸಲು ಬಯಸಿದೆಯಂತೆ.
ಅಯ್ಯರ್ ಅವರೊಂದಿಗೆ ಕೆಕೆಆರ್ ಪ್ರತಿನಿಧಿಗಳು ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಐಪಿಎಲ್-2020 ಋತುವಿನಲ್ಲಿ ಅಯ್ಯರ್ ಡೆಲ್ಲಿ ಕ್ಯಾಪಿಟಲ್ಸ್ನ ನಾಯಕರಾಗಿದ್ದರು. ತಂಡ ಫೈನಲ್ ತಲುಪುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.









