ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಪ್ರತಿಭಟನಾಕಾರರು ಹಿಂಸಾಚಾರಕ್ಕೆ ಇಳಿದಿದ್ದು , ಲಂಕೆ ಪ್ರತಿಭಟನಾ ಕಿಚ್ಚಿಗೆ ಸಹನವಾಗ್ತಿದೆ.. ಈ ನಡುವೆ ದೇಶದ ಅಧ್ಯಕ್ಷ ಗೊಟಬಯ ರಾಜಪಕ್ಸೆ ದೇಶ ಬಿಟ್ಟ ಮಾಲ್ಡೀವ್ಸ್ ಪಲಾಯನ ಮಾಡಿದ್ದು , ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ…
ಇದೆಲ್ಲದರ ನಡುವೆ ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ಭಾರತ ಸಹಕಾರ ನೀಡಿಲ್ಲ ಎಂದು ಕೊಲಂಬೋದಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.
ರಾಜಪಕ್ಸೆ ಶ್ರೀಲಂಕಾದಿಂದ ಮಾಲ್ಡೀವ್ಸ್‌ಗೆ ತೆರಳಲು ಭಾರತ ಸಹಾಯ ಮಾಡಿದೆ ಎಂಬ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದೆ.
ಅಧ್ಯಕ್ಷ ರಾಜಪಕ್ಸೆ ಶ್ರೀಲಂಕಾದಿಂದ ಹೊರಹೋಗಲು ಭಾರತವು ಅನುಕೂಲ ಮಾಡಿಕೊಟ್ಟಿದೆ ಎಂಬ ಕೆಲ ಆರೋಪಗಳಿಗೆ ಭಾರತೀಯ ರಾಯಭಾರ ಕಚೇರಿ ಸ್ಪಷ್ಟನೆ ನೀಡಿದೆ..