ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನೆ ಜೈಶ್ ಇ ಮಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಸೆರೆ ಹಿಡಿದಿದೆ. ಭದ್ರತಾ ಪಡೆಗಳು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೈಶ್ ಇ ಮಹಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.
ಇನ್ನೂ ಬಂಧಿತ ಉಗ್ರರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು 7 ಲಕ್ಷ ರೂಪಾಯಿ ನಗದು, ಒಂದು ಎಕೆ47 ರೈಫಲ್, ಎರಡು ಗ್ರೆನೇಡ್, 30 ಕಾಡುತೂಸುಗಳನ್ನು ವಶಪಡಿಸಿಕೊಳ್ಳಲಾಗಿದೆ.