ಕೊಟ್ಟ ಮಾತು ಉಳಿಸಿಕೊಂಡ ಶುಭಾ – ಬಡವರಿಗೆ ಆಹಾರ ಕಿಟ್ ವಿತರಣೆ
ಬಿಗ್ ಬಾಸ್ ಸೀಸನ್ 8 ಕೋವಿಡ್ 2ನೇ ಅಲೆ ಹಾವಳಿಯಿಂದ ಅರ್ಧಕ್ಕೆ ನಿಂತಿದೆ.. ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಹೊರಬಂದು ಕೆಲವೊಂದ ಕಾರಣಗಳಿಂದ ಸುದ್ದಿಯಲ್ಲಿದ್ದಾರೆ.. ಅಂತೆಯೇ ಮನೆಯಲ್ಲಿ ಮುಗ್ಧತೆಯಿಂದ ಗುರುತಿಸಿಕೊಂಡಿದ್ದ ಶುಬಾ ಪುಂಜಾ ಇದೀಗ ಕೋವಿಡ್ ಸಂಕಷ್ಟದಲ್ಲಿ ಬಡವರ ನೆರವಿಗೆ ಧಾವಿಸಿದ್ಧಾರೆ.
ಹೌದು ನಟಿ ಶುಭಾ ಪೂಂಜಾ ಮನೆಯಿಂದ ಹೊರ ಬರುವ ಮೊದಲು ಈ ಸಂಕಷ್ಟದ ಸಮಯದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುವುದಾಗಿ ಹೇಳಿದ್ದರು. ತನ್ನ ಹಳ್ಳಿಯ ಬಡವರಿಗೆ ಶುಭಾ ಆಹಾರ ಕಿಟ್ ಗಳನ್ನು ವಿತರಿಸಿದ್ಧಾರೆ.
ತನ್ನ ಸಾಮಾಜಿಕ ಕೆಲಸದ ಫೋಟೋಗಳನ್ನು ಶುಭಾ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೋಟೋ ಜೊತೆಗೆ ಶುಭಾ ‘ಬಹಳ ಸಣ್ಣ ಮಟ್ಟದಲ್ಲಿ ಪ್ರಾರಂಭವಾಗಿದೆ. ನನ್ನ ಮನೆಯ ಸಮೀಪದವರಿಗೆ ಆಹಾರ ಕಿಟ್ ವಿತರಿಸಿದ್ದೇನೆ.
ಮುಂದಿನ ದಿನಗಳಲ್ಲಿ ಹೆಚ್ಚಿನ ಜನರನ್ನು ತಲುಪಿಸುವ ಪ್ರಯತ್ನ ಮಾಡುತ್ತೇನೆ. ದಯವಿಟ್ಟು ನಿಮ್ಮ ಪ್ರದೇಶದ ಜನರಿಗೆ ಸಹಾಯ ಮಾಡಿ. ದಯವಿಟ್ಟು ಪ್ರಾಣಿಗಳಿಗೆ ಆಹಾರ ನೀಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಶುಭಾ ಮಾನವೀಯ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚು ಶುಭಾ ಬಿಗ್ ಬಾಸ್ ನಿಂದಲೇ ಅಭಿಮಾನಿಗಳ ಮನಗೆದ್ದಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.