ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಶುಭಾ ಪುಂಜಾ
ಬಿಗ್ ಬಾಸ್ ಸೀಸನ್ 8 ರಲ್ಲಿ ಕ್ಯೂಟ್ ಕ್ಯೂಟ್ ಆಗಿ ಆಡುತ್ತಾ , ಪ್ರೇಕ್ಷಕರನ್ನ ರಂಜಿಸಿದ್ದ ನಟಿ ಶುಭಾ ಪುಂಜಾ ತಮ್ಮ ಗೆಳೆಯನ ಜೊತೆಗೆ ದಾಂತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..
ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿರುವ ಶುಭಾ ಪುಂಜಾ , ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾಗಿದ್ದೇವೆ. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು ಎಂದು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡು ಮದುವೆಯ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶುಭಾ ಪುಂಜಾ ಮದುವೆಯಾಗಿದ್ದು , ಅವರ ಮದುವೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ.. ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ, ಮಜಾಭಾರತ ಖ್ಯಾತಿಯ ರಾಘು ಮದುವೆಯಲ್ಲಿ ಪಾಲ್ಗೊಂಡಿದ್ದಾರೆ.
ಶುಭಾ ಪುಂಜಾ ತಮ್ಮ ಗೆಳೆಯ ಅಂದ್ರೆ ಈಗ ಮದುವೆಯಾಗಿರುವ ಸುಮಂತ್ ರನ್ನ ಚಿನ್ನಿ ಬಾಂಬ್ ಎಂದು ಕರೆಯುತ್ತಿದ್ದರು.. ಬಿಗ್ ಬಾಸ್ ಮನೆಯಲ್ಲೂ ಕೂಡ ಶುಭಾ ಸದಾ ತಾನು ಮದುವೆಯಾಗುವ ಹುಡುಗನ ಬಗ್ಗೆ ಮಾತನಾಡ್ತಿದ್ದರು..
ಬಿಗ್ ಬಾಸ್ ನಿಂದ ಹೊರಬಂದ ನಂತರ ಶುಭಾ ಪುಂಜಾ ತನ್ನ ಗೆಳೆಯನ ಜೊತೆಗೆ ಸಾಕಷ್ಟು ಟ್ರಿಪ್ ಗಳಿಗೆ ಹೊರಟಿದ್ದರು.. ಸುತ್ತಾಟದ ಫೋಟೋಗಳನ್ನ ಹಂಚಿಕೊಳ್ತಿದ್ದರು.. ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಶುಭಾಗೆ ನೆಟ್ಟಿಗರು ಶುಭ ಹಾರೈಸುತ್ತಿದ್ದಾರೆ..