ADVERTISEMENT
Thursday, June 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಇದೆಯಾ? ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ?

Mahesh M Dhandu by Mahesh M Dhandu
May 2, 2022
in Newsbeat, State, ಮುಂಬೈ ಕರ್ನಾಟಕ
H D Kumaraswamy

H.D.Kumaraswamy

Share on FacebookShare on TwitterShare on WhatsappShare on Telegram

ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಇದೆಯಾ? ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ?

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಇದೆಯಾ? ಅಥವಾ ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

Related posts

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

June 18, 2026
ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

June 18, 2026

ಬೆಳಗಾವಿ, ನಿಪ್ಪಾಣಿ, ಕಾರವಾರ,ಬೀದರ್, ಭಾಲ್ಕಿಯನ್ನು ಸೇರಿಸಿಕೊಂಡು ಸಂಯುಕ್ತ ಮಹಾರಾಷ್ಟ ರಚನೆಯಾಗಬೇಕು ಎಂದು ಎಂಇಎಸ್ ಯುವ ಘಟಕದ ಅಧ್ಯಕ್ಷ ಶುಭಂ ಶೆಳಕೆ ಟ್ವೀಟ್ ಮಾಡಿದ್ದು, ಕನ್ನಡಿಗರನ್ನು ಕೆಣಕಿದ್ದಾರೆ.  ಇದಕ್ಕೆ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿರುವ ಹೆಚ್ ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿದ್ದಾರೆ.

shubham-shelke-controversial-post H D Kumaraswamy slams BJP state govt saaksha tv
shubham-shelke-controversial-post H D Kumaraswamy slams BJP state govt saaksha tv

ಹೆಚ್ ಡಿ ಕುಮಾರಸ್ವಾಮಿ ತಮ್ಮ ಟ್ವೀಟ್ ನಲ್ಲಿ…

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗಲೇ ರಾತ್ರೋರಾತ್ರಿ ʼಭಯೋತ್ಪಾದಕ ದಾಳಿʼ ನಡೆಸಿ ಹಿಂಸಾಕಾಂಡ ಸೃಷ್ಟಿಸಿದ್ದ, ನಮ್ಮ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಎಂಇಎಸ್‌ ಕಿರಾತಕರ ಬಗ್ಗೆ ರಾಜ್ಯ ಬಿಜೆಪಿ ಸರಕಾರ ಮೃದುದೋರಣೆ ತಾಳಿದೆ ಎನ್ನುವುದು ನನ್ನ ನೇರ ಆರೋಪ.

ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂಇಎಸ್‌) ನಿಷೇಧಿಸಿ ಎಂದು ಇಡೀ ಕರ್ನಾಟಕವೇ ಒಕ್ಕೊರಲಿನಿಂದ ಆಗ್ರಹ ಮಾಡಿತ್ತು. ಬಿಜೆಪಿ ಸರಕಾರ ಅಸಡ್ಡೆ ತೋರಿದ ಪರಿಣಾಮ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ. ಭಾಷೆ-ಭಾಷೆಗಳ ಜನರ ನಡುವೆ ಬೆಂಕಿ ಹಚ್ಚುವ ಇವರು ಭಯೋತ್ಪಾದಕರು.

ಮಹಾರಾಷ್ಟ್ರ ದಿನದ ನೆಪದಲ್ಲಿ ಎಂಇಎಸ್‌ ಪುಂಡರು ನಾಡದ್ರೋಹ ಎಸಗಿದ್ದಾರೆ. ಕರ್ನಾಟಕದಲ್ಲೇ ಇದ್ದು ಕನ್ನಡ ನೆಲದ ವಿರುದ್ಧ ವಿಧ್ವಂಸಕ ಕೃತ್ಯ ಎಸಗಿರುವ ಶುಭಂ ಶೆಳಕೆ ಎಂಬ ಧೂರ್ತನು ಫೇಸ್‌ಬುಕ್‌ನಲ್ಲಿ ರಾಜ್ಯವನ್ನು ಒಡೆಯುವ ಸಂದೇಶ ಪೋಸ್ಟ್‌ ಮಾಡಿದ್ದಾನೆ. ವಿಡಿಯೋ ಮೂಲಕ ಕನ್ನಡಿಗರನ್ನು ಕೆಣಕಿದ್ದಾನೆ.

https://twitter.com/hd_kumaraswamy/status/1521014658202697728?s=20&t=-RPsUQ_nd7AuwBZRvPeCjA

ಕರ್ನಾಟಕದ ಭೂಪಟವನ್ನು ತಿರುಚಿ ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿದ ರೀತಿಯ‌ ನಾಡದ್ರೋಹಿ ಗ್ರಾಫಿಕ್ ಮಾಡಿ ಅದನ್ನು ಪೋಸ್ಟ್‌ ಮಾಡಿರುವ ಶೆಳಕೆಗೆ ಚಳಿ ಬಿಡಿಸಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಸಂಯುಕ್ತ ಮಹಾರಾಷ್ಟ್ರಕ್ಕೆ ಬೆಳಗಾವಿ ರಕ್ತ ಹೋರಾಟದ ಮುನ್ನುಡಿ ಬರೆದಿದೆ” ಎಂದು ಉದ್ರೇಕಕಾರಿ ಬರಹ ಬರೆದ ಅವನ ವಿರುದ್ಧ ಭಯೋತ್ಪಾದಕ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಬೇಕು. ಬೆಳಗಾವಿ ಗಲಾಟೆಯಲ್ಲಿ ಜೈಲು ಸೇರಿದ್ದ ಶುಭಂ ಶೆಳಕೆ, ಈಗ ರಾಜಾರೋಷವಾಗಿ ಓಡಾಡಿಕೊಂಡಿದ್ದಾನೆ ಎಂದರೆ ಏನರ್ಥ?

ಕರ್ನಾಟಕದಲ್ಲಿ ಕನ್ನಡಿಗರ ಸರಕಾರ ಇದೆಯಾ? ಅಥವಾ ಮಹಾರಾಷ್ಟ್ರದ ಬಾಲಂಗೋಚಿ ಆಡಳಿತ ಉಂಟಾ? ತಲೆಯ ಮೇಲೆ ಕೇಸರಿ ಪೇಟ, ಭುಜದ ಮೇಲೆ ಕೇಸರಿಶಾಲು ಧರಿಸಿ ಪೋಸು ಕೊಡುವ ಎಂಇಎಸ್ ಪುಂಡರ ಮೇಲೆ ಪ್ರಕರಣ ದಾಖಲಿಸಲು ಬಿಜೆಪಿ ಸರಕಾರದ ಮನಸ್ಸು ಒಪ್ಪುತ್ತಿಲ್ಲವಾ? ಸ್ಪಷ್ಟಪಡಿಸಲಿ

https://twitter.com/hd_kumaraswamy/status/1521014655556194305?s=20&t=-RPsUQ_nd7AuwBZRvPeCjA

ಬಿಜೆಪಿ ಸರಕಾರಕ್ಕೆ ಇರುವುದು ಒಂದೇ ಆಯ್ಕೆ. ಎಂಇಎಸ್ ಅನ್ನು ಕೂಡಲೇ ನಿಷೇಧಿಸಬೇಕು ಹಾಗೂ ಕಿಡಿಗೇಡಿ ಶೆಳಖೆಯನ್ನು ಬಂಧಿಸಿ ರಾಜ್ಯದಿಂದ ಹೊರಹಾಕಬೇಕು. ಇಲ್ಲವಾದರೆ ʼಬಿಜೆಪಿಯನ್ನು ಮಹಾರಾಷ್ಟ್ರ ಏಕೀಕರಣ ಸಮಿತಿಯ ಬಾಲʼ ಎನ್ನದೇ ವಿಧಿ ಇಲ್ಲ.

ರಾಜ್ಯವಿರೋಧಿ ರಾಷ್ಟ್ರೀಯವಾದʼವನ್ನು ಕನ್ನಡಿಗರು ಎಂದೂ ಸಹಿಸುವುದಿಲ್ಲ ಎನ್ನುವುದನ್ನು ಬಿಜೆಪಿ ನೆನಪಿನಲ್ಲಿ ಇಟ್ಟುಕೊಂಡರೆ ಒಳ್ಳೆಯದು ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

shubham-shelke-controversial-post H D Kumaraswamy slams BJP state govt

Tags: #Saaksha TVBJPH D KUMARASWAMYkarnataka
ShareTweetSendShare
Join us on:

Related Posts

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

₹25,400 ಕೋಟಿ ಒಪ್ಪಂದ; ಪಿಜ್ಜಾ ಹಟ್ ವ್ಯವಹಾರ ಮಾರಾಟಕ್ಕೆ ನಿರ್ಧಾರ

by Shwetha
June 18, 2026
0

ಜಾಗತಿಕ ಆಹಾರ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಯಮ್.ಕಾಮ್ ತನ್ನ ಅಧೀನದಲ್ಲಿರುವ ಪ್ರಸಿದ್ಧ ಪಿಜ್ಜಾ ಹಟ್ ವ್ಯವಹಾರದ ಕೆಲವು ಭಾಗಗಳನ್ನು ಎರಡು ಪ್ರತ್ಯೇಕ ಒಪ್ಪಂದಗಳ ಮೂಲಕ ಒಟ್ಟು...

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

ಮುಂಬೈನಲ್ಲಿ ಕಣ್ಣೀರು ಬಿಡದಿಯಲ್ಲಿ ಮೌನ – ಡಿಕೆಶಿ ರಿಯಲ್ ಎಸ್ಟೇಟ್ ಮಾಫಿಯಾಗೆ 2 ಲಕ್ಷ ಮರಗಳು ಬಲಿ? : ರಾಹುಲ್ ಗಾಂಧಿಯ ಪರಿಸರ ಹೋರಾಟದ ಅಸಲಿ ಮುಖವಾಡ ಕಳಚಿದ ಅಶೋಕ್.

by Shwetha
June 18, 2026
0

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿ ಮತ್ತು ಲಕ್ಷಾಂತರ ಮರಗಳನ್ನು ನಾಶಪಡಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

ಆ್ಯಪ್‌ ನಿಷೇಧ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಟೆಲಿಗ್ರಾಮ್

by Shwetha
June 18, 2026
0

ನೀಟ್ ಮರು-ಪರೀಕ್ಷೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿಧಿಸಿರುವ ತಾತ್ಕಾಲಿಕ ನಿಷೇಧವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಕ್ರಮದಿಂದ ತಮ್ಮ ಸೇವೆಗೆ...

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

ಮೇಲ್ಮನೆ ಯುದ್ಧಕ್ಕೆ ಕೈ-ಕಮಲ-ದಳ ಸನ್ನದ್ಧ ( PARISHATH ELECTION)

by admin
June 18, 2026
0

ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಸಕಲ ಸಿದ್ಧತೆ ವಿಧಾನಸೌಧದ 106ನೇ ಕೊಠಡಿಯಲ್ಲಿ ಮತದಾನ ಕೇಂದ್ರ ಸ್ಥಾಪನೆ ಸಿಸಿಟಿವಿ ಕಣ್ಗಾವಲಿನಡಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಡಿ.ಕೆ. ಶಿವಕುಮಾರ್...

ನಾನೇನು ಕೇರಳಕ್ಕೆ ಮೋಜು ಮಸ್ತಿ ಮಾಡಲು ಹೋಗಿದ್ನಾ : ಹಗಲು ರಾತ್ರಿ ಪಕ್ಷಕ್ಕಾಗಿ ದುಡಿದರೂ ನನ್ನ ಮೇಲೆ ಆರೋಪವೇಕೆ ಜಮೀರ್ ಅಹ್ಮದ್ ಖಾನ್ ಪ್ರಶ್ನೆ

ಸಚಿವ ಸ್ಥಾನಕ್ಕಾಗಿ ಹಠ ಹಿಡಿಯಲ್ಲ- ಹೈಕಮಾಂಡ್ ನಿರ್ಧಾರಕ್ಕೆ ಜಮೀರ್ ಶರಣು: ಡಿ ಕೆ ಸುರೇಶ್ ಭೇಟಿಯ ಕುರಿತು ಹೊರಬಂತು ಅಸಲಿ ಸತ್ಯ!

by Shwetha
June 18, 2026
0

ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ರಚನೆಯ ಕುರಿತು ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ನಡುವೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಕಾಂಗ್ರೆಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram