Shubman Gill: ವಿರಾಟ್ ದಾಖಲೆ ಮುರಿದ ಶುಭ್ ಮನ್ ಗಿಲ್…
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 168 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. 23ರ ಹರೆಯದ ಆರಂಭಿಕ ಆಟಗಾರ ಶುಭಮನ್ ಗಿಲ್ (Shubman Gill) ಭಾರತದ ಗೆಲುವಿನ ಹೀರೋ ಆಗಿದ್ದರು.
ಏಕದಿನ ಪಂದ್ಯಗಳಲ್ಲಿ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರು ಶತಕ ಸಿಡಿಸಿದ್ದ ಶುಭಮನ್ ಗಿಲ್ (Shubman Gill) ಮೊದಲೆರಡು ಟಿ20ಯಲ್ಲಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅವರು ಅದನ್ನು ಸರಿದೂಗಿಸಿದರು. ಮೂರನೇ ಪಂದ್ಯದಲ್ಲಿ ಅವರು 126 ರನ್ಗಳ ಇನ್ನಿಂಗ್ಸ್ ಕಟ್ಟಿದರು. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ಪರ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಕಿರಿಯ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಶುಭಮನ್ ಗಿಲ್ (Shubman Gill) ಪಾತ್ರರಾದರು. ಇದರೊಂದಿಗೆ ಅವರು ವಿರಾಟ್ ಕೊಹ್ಲಿ (122 ರನ್) ದಾಖಲೆಯನ್ನು ಮುರಿದಿದ್ದಾರೆ.
ಶುಭಮನ್ ಗಿಲ್ (Shubman Gill) ಇದೀಗ ಟಿ20 ಮಾದರಿಯಲ್ಲಿ ಭಾರತದ ಅತ್ಯಂತ ಕಿರಿಯ ಶತಕವೀರ ಎನಿಸಿಕೊಂಡಿದ್ದಾರೆ. ಈ ಮೂಲಕ ಶುಭಮನ್ ಗಿಲ್ (SHUBMAN GILL) ಸುರೇಶ್ ರೈನಾ ದಾಖಲೆಯನ್ನು ಮುರಿದಿದ್ದಾರೆ. ಶುಭಮನ್ ಗಿಲ್ (Shubman Gill) ಅವರ ಶತಕವು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳ 13ನೇ ಶತಕವಾಗಿದೆ. ರೋಹಿತ್ ಶರ್ಮಾ ನಾಲ್ಕು ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
6 ತಿಂಗಳಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಶತಕ
ಶುಭಮನ್ ಗಿಲ್ (Shubman Gill) ಅವರು ಕಳೆದ 6 ತಿಂಗಳುಗಳಲ್ಲಿ ಟೆಸ್ಟ್, ODI ಮತ್ತು T20 ಎಲ್ಲಾ ಮೂರು ಸ್ವರೂಪಗಳಲ್ಲಿ ಶತಕಗಳನ್ನು ಗಳಿಸಿದ್ದು, ಅವರು ಅದ್ಭುತ ಫಾರ್ಮ್ ನಲ್ಲಿದ್ದಾರೆ. ಶುಭಮನ್ ಗಿಲ್ (Shubman Gill) ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಗಳಿಸಿದ ಐದನೇ ಭಾರತೀಯ ಬ್ಯಾಟ್ಸ್ಮನ್ ಮತ್ತು ವಿಶ್ವದ 21 ನೇ ಬ್ಯಾಟ್ಸ್ಮನ್ ಆಗಿದ್ದಾರೆ. ಗಿಲ್ಗಿಂತ ಮೊದಲು ಸುರೇಶ್ ರೈನಾ, ಕೆಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಬಾರಿಸಿದ ವಿಶ್ವದ ಎರಡನೇ ಕಿರಿಯ ಬ್ಯಾಟ್ಸ್ಮನ್ ಶುಭಮನ್ ಗಿಲ್ (Shubman Gill). ಪಾಕಿಸ್ತಾನದ ಮೊಹಮ್ಮದ್ ಶಹಜಾದ್ 22 ವರ್ಷ 127 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ಶುಭಮನ್ ಗಿಲ್ (Shubman Gill) 23 ವರ್ಷ 146 ದಿನಗಳಲ್ಲಿ ಈ ಸಾಧನೆ ಮಾಡಿದ್ದಾರೆ.
Shubman Gill: Shubman Gill broke Virat’s record…








