ಸೈಬಿರಿಯಾದಲ್ಲಿ ವಿಮಾನ ಅಪಘಾತ – ನಾಲ್ವರ ಸಾವು
ಸೈಬೀರಿಯಾದಲ್ಲಿ ಪ್ಯಾರಾಚ್ಯೂಟರ್ ಗಳನ್ನು ಕರೆದೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದ್ದು, ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಸೈಬೀರಿಯಾ ಪ್ರದೇಶದ ಕೆಮೆರೊವೊದ ತನಯ್ ವಾಯುನೆಲೆಯಲ್ಲಿ ತರಬೇತಿ ಹಾರಾಟದ ಸಮಯದಲ್ಲಿ 19 ಜನರನ್ನು ಹೊತ್ತ ಎಲ್ -410 ವಿಮಾನ ಅಪಘಾತಕ್ಕೀಡಾಗಿದೆ..
ವಿಮಾನದ ಒಂದು ಎಂಜಿನ್‌ನ ವೈಫಲ್ಯವಾಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಿಮಾನದಲ್ಲಿದ್ದ 19 ಜನರಲ್ಲಿ ನಾಲ್ವರು ಮೃತಪಟ್ಟಿದ್ದಾರೆ, ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಉಳಿದ 11 ಮಂದಿ ಗಾಯಗೊಂಡಿದ್ದಾರೆ ಎಂದು ಕೆಮೆರೊವೊ ಪ್ರಾದೇಶಿಕ ಗವರ್ನರ್ ಸೆರ್ಗೆಯ್ ಸಿವಿಲಿಯೋವ್ ಇನ್‌ಸ್ಟಾಗ್ರಾಮ್‌ನಲ್ಲಿ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.