ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ : ಸಿದ್ದಗಂಗಾ ಶ್ರೀ bs-yediyurappa saaksha tv
ಬೆಂಗಳೂರು : ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಸಿಎಂ ಬದಲಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರ ಬ್ಯಾಟ್ ಬೀಸಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರವಾಗಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ. ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಅವರು ಪೂರ್ಣಾವಧಿ ಸಿಎಂ ಆಗಿ ಇರಬೇಕು. ಎಲ್ಲಾ ಮಠಾಧೀಶರು ಇದನ್ನೇ ಹೇಳುತ್ತಿದ್ದಾರೆ ಎಂದು ಹೇಳಿದರು.
ಇದು ಸಂದಿಗ್ಧ ಪರಿಸ್ಥಿತಿ. ಈಗ ಬದಲಾವಣೆ ಆದರೆ ಉತ್ತಮ ಸರ್ಕಾರ ಕೊಡಲು ಸಾಧ್ಯವಿಲ್ಲ. ಎಲ್ಲಾ ಸಿಎಂಗಳಿಗೂ ನಾವು ಬೆಂಬಲ ಕೊಡ್ತೀವಿ. ಯಡಿಯೂರಪ್ಪ ಮುಂದುವರಿಕೆಯಾಗಬೇಕು. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು. ಶಾಸಕರು ಒಪ್ಪಿದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯಡಿಯೂರಪ್ಪ ಅವಧಿ ಪೂರ್ಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.