ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ನಿಷೇಧಿಸಿ : ಸಿದ್ದಲಿಂಗ ಸ್ವಾಮೀಜಿ
ಕಲಬುರಗಿ: ಮಸೀದಿಗಳ ಮೇಲಿನ ಧ್ವನಿವರ್ಧಕಗಳನ್ನು ನಿಷೇಧಿಸುವಂತೆ ರಾಜ್ಯ ಸರಕಾರಕ್ಕೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಮನವಿ ಮಾಡಿದ್ದಾರೆ.
ಈ ಕುರಿತು ಕಲಬುರಗಿಯಲ್ಲಿ ಮಾತನಾಡಿದ ಅವರು ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯವಾಗುತ್ತಿದೆ. ಹೆಚ್ಚು ಶಬ್ದವಿಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದ ರಾಜ್ಠಾಕ್ರೆ ಹೇಳಿಕೆಗೆ ಸಿದ್ದಲಿಂಗ ಸ್ವಾಮೀಜಿ ಬೆಂಬಲ ನೀಡಿದ ಅವರು ರಾಜ್ಯದಲ್ಲಿ ಕೂಡಾ ಮಸೀದಿಯಲ್ಲಿನ ಧ್ವನಿವರ್ಧಕ ಗಳನ್ನು ಬಂದ್ ಮಾಡಬೇಕು. ಇದರಿಂದ ಸಾಮಾನ್ಯ ಜನರಿಗೆ ತೊಂದರೆಯಾಗುತ್ತಿದೆ.
ಜೊತೆಗೆ ಪರಿಸರ ಮಾಲಿನ್ಯ ಕೂಡಾ ಆಗುತ್ತಿದೆ. ರಂಜಾನ್ ಸಮಯದಲ್ಲಿ ಸೈರನ್ ಬಳಸೋದರಿಂದ ಕೂಡಾ ಜನರಿಗೆ ಕಿರಿಕಿರಿ ಆಗುತ್ತಿದೆ. ರಾಜ್ಯದಲ್ಲಿ ಮಸೀದಿಯಲ್ಲಿನ ಧ್ವನಿವರ್ಧಕ ನಿಷೇಧ ಮಾಡುವಂತೆ ಮನವಿ ಮಾಡಿದ್ದೆವು. ಆದರೆ ಇಲ್ಲಿವರಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನಾದರೂ ಕೂಡಲೇ ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಅಂತ ಒತ್ತಾಯಿಸಿದರು.









