ಬೆಂಗಳೂರು : ಯೋಗ ಒಂದು ದಿನದ ಪ್ರದರ್ಶನ ಆಗಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಂತರರಾಷ್ಟ್ರೀಯ ಯೋಗ ದಿನಚಾರಣೆಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಯೋಗ ಮಾಡುತ್ತಿರುವ ಪೋಟೋವನ್ನು ಸಾಮಾಜಾಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಕಾರಣಕ್ಕೆ ಸಿದ್ದರಾಮಯ್ಯ ತಮ್ಮ ಸ್ವ ನಿವಾಸದಲ್ಲಿ ಯೋಗ ಮಾಡಿದ್ದಾರೆ ಎನ್ನಲಾಗಿದೆ.
ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಯೋಗ ಒಂದು ದಿನದ ಪ್ರದರ್ಶನ ಆಗಬಾರದು. ನಿರಂತರ ಅಭ್ಯಾಸ ಮಾಡಲು ಪ್ರಯತ್ನಿಸ ಬೇಕು. ಯೋಗಾಭ್ಯಾಸ ವೈಯಕ್ತಿಕವಾಗಿ ನನ್ನ ಆರೋಗ್ಯಕ್ಕೆ ನೆರವಾಗಿದೆ. ನೀವೂ ನಿಮಗಾಗಿ ಯೋಗಾಭ್ಯಾಸ ಮಾಡಿ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.