ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಎಣ್ಣೆ, ನೀರು ಇದ್ದಂತೆ: ಗೋವಿಂದ ಕಾರಜೋಳ Saaksha Tv
ಬಾಗಲಕೋಟೆ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಬ್ಬರು ಎಣ್ಣೆ, ನೀರು ಇದ್ದಂತೆ ಎಂದಿಗೂ ಸೇರುವುದಿಲ್ಲ. ಎಂದು ಬಾಗಲಕೋಟೆಯಲ್ಲಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರಲ್ಲಿಯೇ ಒಡಕುಗಳಿವೆ. ಅವರು ಎಂದಿಗೂ ಒಂದಾಗುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ಖರ್ಗೆ, ಪರಮೇಶ್ವರ್ ಹಾಗೂ ಶಾಮನೂರು ಶಿವಶಂಕರಪ್ಪ ಅವರದೊಂದ್ದು ಗುಂಪು ಸೇರಿ ಒಟ್ಟಾರೆ ಮೂರು ಗುಂಪು ಇದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ಜನ ಹೀನಾಯವಾಗಿ ಸೋಲಿಸಿದರು. ಇದನ್ನು ಸಿದ್ದರಾಮಯ್ಯನವರು ಅರ್ಥ ಮಾಡಿಕೊಳ್ಳಬೇಕು. ಸಿದ್ದರಾಮಯ್ಯ ಕಾಲದಲ್ಲಿ ಕೊರೊನಾ, ಪ್ರವಾಹ ಇರಲಿಲ್ಲ. ಆದರೂ ಅವರು ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕೆಲಸ ಮಾಡಿಲ್ಲವೆಂದು ಜನ ಅವರನ್ನು ತಿರಸ್ಕರಿಸಿದ್ದಾರೆ ಅಷ್ಟೇ ಎಂದು ಯೋಜನೆಗಳಿಗೆ ಹೆಸರು ಬದಲಿಸಿದ್ದೇ ಬಿಜೆಪಿಯ ಸಾಧನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರಿಗೇಟು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷ ಮುಳುಗುವ ಹಡಗು. ಅಂತಹ ಪಕ್ಷಕ್ಕೆ ಬಿಜೆಪಿ ಶಾಸಕರು ಹೋಗುವುದಿಲ್ಲ. ಇನ್ನೂ ಬಿಜೆಪಿಯಲ್ಲಿ ವಲಸೆ ಶಾಸಕರು ಎಂದು ಯಾರೂ ಇಲ್ಲ. ಬಿಜೆಪಿಗೆ ಬಂದ ಬಳಿಕ ಅವರು ಪ್ರಾಥಮಿಕ ಸದಸ್ಯತ್ವ ಪಡೆದಿರುತ್ತಾರೆ. ಸಾಯುವವರೆಗೆ ಬಿಜೆಪಿಯಲ್ಲೇ ಇರುತ್ತೇವೆ ಎಂದಿದ್ದಾರೆ ಶಾಸಕರು. ಬೆಳಗಾವಿ ಜಿಲ್ಲೆಯ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.