ಬೆಂಗಳೂರು : ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳಿದ್ದಾರೆ.
ಸದ್ಯ ಬಾದಾಮಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಎಷ್ಟೋ ಮಂದಿ ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, “ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ” ಎಂದಿದ್ದಾರೆ. ಹಾಗೇ ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ.
ಇದಕ್ಕಾಗಿ ಕ್ಷಮೆ ಇರಲಿ.
ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.
3/3— Siddaramaiah (@siddaramaiah) August 19, 2020









