Siddaramaiah | ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು
ಬೆಂಗಳೂರು : ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.
https://twitter.com/siddaramaiah/status/1520274397331791873?s=20&t=xnd3-CPJ79UVpywxYtkEUw
ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್‌ಗಳನ್ನು ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು.
ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್‌ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ.
https://twitter.com/siddaramaiah/status/1520275504082800641?s=20&t=xnd3-CPJ79UVpywxYtkEUw
ಪಿಎಸ್ಐ ನೇಮಕಾತಿಗೆ ಬಿಜೆಪಿ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ. Siddaramaiah Arrag Jnanendra should be dismantled








