ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ಆತ ನಾಗರಿಕ ಜಗತ್ತಿನಲ್ಲಿ ಇರಲು ನಾಲಾಯಕ್ ಆಗಿರುವ ವ್ಯಕ್ತಿ. ನಾಡಿನ ಜನರ ಹಿತದೃಷ್ಠಿತಯಿಂದ ಆ ವ್ಯಕ್ತಿಯನ್ನು ಬಿಜೆಪಿ ತಕ್ಷಣವೇ ಕಾಡಿಗೆ ಕೊಂಡು ಹೋಗಿ ಬಿಟ್ಟುಬರಬೇಕು ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹುಲಿಯನ್ನು ಕಾಡಿಗೆ ಓಡಿಸುತ್ತೇನೆ, ಬಂಡೆಯನ್ನು ಹೊಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಗುತ್ತಿದ್ದಾರೆ. ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು. ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ’ Immature fellow ಎಂದು ಗುಡುಗಿದರು.
ಇದನ್ನೂ ಓದಿ : ರಂಗೇರಿದ ಶಿರಾ ಕಣ : ಇಂದು ಸಿದ್ದರಾಮಯ್ಯ-ದೇವೇಗೌಡ ಮತಬೇಟೆ
ಮುಂದುವರಿದು ಕಟೀಲ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷರ ನಾಲಿಗೆಯಲ್ಲಿ ಮಾತ್ರ ವಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಟಾಂಗ್ ನೀಡಿದರು.
ಇನ್ನು ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ಸಂತೋಷಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ
ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡುವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.
ಇದನ್ನೂ ಓದಿ : `ಹರಕು ಬಾಯಿ’ ನನ್ನದಲ್ಲ, ಈಶ್ವರಪ್ಪರದ್ದು : ಯತ್ನಾಳ್
ಮಾತೆತ್ತಿದರೆ ಸಂಸ್ಕಾರ,ಸಂಸ್ಕøತಿ ಎಂದು ಬೋದನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು,ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel