ಸಿದ್ದರಾಮಯ್ಯ ಗೆದ್ದರೂ ವಿಪಕ್ಷ ಸ್ಥಾನದಲ್ಲೇ ಕೂರಿಸ್ತೇನೆ : ಬಿಎಸ್ ವೈ
ಬೆಂಗಳೂರು : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಂದು ವೇಳೆ ಸಿದ್ದರಾಮಯ್ಯ ಗೆದ್ದರೇ ಅವರನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಕೆಲ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಬಳಿಕ ಕಲಾಪದಲ್ಲಿ ಭಾಗಿಯಾಗುವುದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬೊಮ್ಮಾಯಿ ಆಡಳಿತವನ್ನು ಹೊಗಳಿಸಿದರು.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರಿಗೆ ತಮ್ಮಿಂದ ಅಗತ್ಯವಿರುವ ನೆರವು ನೀಡುತ್ತೇನೆ ಎಂದು ತಿಳಿಸಿದರು.
ಇದೇ ವೇಳೆ ಮುಂದಿನ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂಬರುವ ದಿನಗಳಲ್ಲಿಯೂ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮ ವಹಿಸುತ್ತೇವೆ.
ಕಟೀಲ್ ಜೊತೆಗೂಡಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದರು.









