ಕೋವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರಕ್ಕೆ ಸಿದ್ದು ಒತ್ತಾಯ Siddaramaiah
ಬೆಂಗಳೂರು : ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಐದು ಲಕ್ಷ ರುಪಾಯಿ ಪರಿಹಾರ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳ ಬಿಪಿಎಲ್ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಒಂದು ಲಕ್ಷ ರೂಪಾಯಿ ಪರಿಹಾರವನ್ನು ವಿಪತ್ತು ನಿರ್ವಹಣಾ ನಿಯಮಕ್ಕೊಳಪಡಿಸಿ ಐದು ಲಕ್ಷ ರೂಪಾಯಿಗೆ ಹೆಚ್ಚಿಸಬೇಕೆಂದು ಒತ್ತಾಯಿಸುತ್ತೇನೆ.
ಕೊರೊನಾ ಸೋಂಕನ್ನು ಈಗಾಗಲೇ ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಲಾಗಿದೆ. ಆದ್ದರಿಂದ ವಿಪತ್ತು ಪರಿಹಾರದ ನಿಯಮಗಳಡಿ ಮೃತ ವ್ಯಕ್ತಿಗಳ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಸಾಧ್ಯ ಇದೆ. ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಈ ಅವಕಾಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡೋದಾಗಿ ತಿಳಿಸಿದ್ದರು.









