ಗೂಂಡಾಗಿರಿಗೆ ನಾವು ಹೆದರುವವರಲ್ಲ.. ಹುಷಾರ್ ! : ಸಿದ್ದರಾಮಯ್ಯ ( Siddaramaiah )
“ಸಿದ್ದರಾಮಯ್ಯ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ”
ಬೆಂಗಳೂರು : ರಾಜರಾಜೇಶ್ವರಿ ನಗರ ಉಪಚುನಾವಣೆ ಕಣ ರಂಗೇರಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ( Siddaramaiah ) ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತಬೇಟೆಗೆ ಇಳಿದಿದ್ದಾರೆ. ಚುನಾವಣೆ ಘೋಷಣೆ ಬಳಿಕವೂ ಆರ್.ಆರ್ ನಗರದಲ್ಲಿ ಪ್ರಚಾರದಿಂದ ದೂರವೇ ಉಳಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆಯಿಂದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಇದನ್ನೂ ಓದಿ : ಗ್ರಾಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧ : ಕೆ.ಎಸ್.ಈಶ್ವರಪ್ಪ
ಸಿದ್ದು ಪ್ರಚಾರ ವೇಳೆ ಮೋದಿ ಪರ ಘೋಷಣೆ..!
ನಿನ್ನೆ ಆರ್.ಆರ್ ನಗರ ಕ್ಷೇತ್ರದ ಜೆ.ಪಿ ವಾರ್ಡ್ ನಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿರುವ ವೇಳೆ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆದರೆ, ಸಿದ್ದರಾಮಯ್ಯ ಮಾತ್ರ ಇದಕ್ಕೆ ತಲೆಕೆಡಿಸಿಕೊಳ್ಳದೆ ರೋಡ್ ಶೋ ಮುಂದುವರೆಸಿದ್ದರು.
ಇದನ್ನೂ ಓದಿ : ಆರ್.ಆರ್ ನಗರದಲ್ಲಿ ಸಿದ್ದು ಅಬ್ಬರದ ಮತಬೇಟೆ: ಬಿಜೆಪಿ ಕಾರ್ಯಕರ್ತರಿಂದ ಮೋದಿ ಘೋಷಣೆ
ಇದೀಗ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ…
ನಾನು ಪ್ರಚಾರಕ್ಕೆ ಬಂದಿರುವುದನ್ನು ಕಂಡು ಸೋಲಿನ ಭೀತಿಗೀಡಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ರೌಡಿಸಂ ಮೂಲಕ ಮತದಾರರನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ಗೂಂಡಾಗಿರಿಗೆ ನಾವು ಹೆದರುವವರಲ್ಲ. ಇದಕ್ಕೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ಹುಷಾರ್ !
ಇದನ್ನೂ ಓದಿ : ಬಿಜೆಪಿ ಬ್ರಹ್ಮಾಸ್ತ್ರಗಳಿಗೆ ಕಾಂಗ್ರೆಸ್ ಬಳಿ ಅಸ್ತ್ರ ಇಲ್ಲ : ಆರ್.ಅಶೋಕ್ ವ್ಯಂಗ್ಯ
“ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ ಎಂದು ಕಿಡಿಕಾರಿದ್ದಾರೆ.
ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ ಎಂದು ಆರೋಪಿಸಿದ್ದಾರೆ.
ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಬೆಂಕಿಕಾರಿದ್ದಾರೆ.
ಇದನ್ನೂ ಓದಿ : ನಾನೇ ಸಿಎಂ ಆಗ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ : ಹೊರಟ್ಟಿ
ನಿನ್ನೆ ಪ್ರಚಾರದ ವೇಳೆಯೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ, ಕಳೆದ ವರ್ಷ ಕೆ.ಆರ್ ಪೇಟೆ ಉಪಚುನಾವಣೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರವಾಗಿದೆ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









