ಬಸವರಾಜ ಬೊಮ್ಮಾಯಿ ಅವರೇ ನಾಟಕ ನಿಲ್ಲಿಸಿ : ಸಿದ್ದರಾಮಯ್ಯ Siddaramaiah saaksha tv
ಬೆಂಗಳೂರು : ಕುರಿಗಾಯಿಗಳ ಓಟಿನ ಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಶಿವಮೊಗ್ಗದಲ್ಲಿ ಚಿಕ್ಕೋಡಿ ತಾಲೂಕಿನ ಕುರಿಗಾಯಿ ನಾಯಿಂಗ್ಲಾಜ್ ವಾಸಪ್ಪ ಮಾನಿಯವರಿಗೆ ಸೇರಿದ ಸುಮಾರು 40 ಕುರಿಗಳು ಸಾವನ್ನಪ್ಪಿವೆ. ಇಂತಹವರಿಗೆ ನೆರವಾಗಲೆಂದೇ ನಾನು ಜಾರಿಗೆ ತಂದಿದ್ದ ‘ಅನುಗ್ರಹ’ ಯೋಜನೆಯನ್ನು ಸ್ಥಗಿತಗೊಳಿಸಿದ್ದ ಬಿಜೆಪಿ ಸರ್ಕಾರವನ್ನು ಕಟುಕರ ಸರ್ಕಾರ ಎನ್ನದೆ ಬೇರೆ ಹೇಗೆ ಕರೆಯೋಣ ಎಂದು ಕಿಡಿಕಾರಿದ್ದಾರೆ.
ಕುರಿಗಾಯಿಗಳ ಓಟಿನ ಬೇಟೆಗಾಗಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ನಾಟಕ ನಿಲ್ಲಿಸಿ. ನಿಮಗೆ ಕುರಿಗಾಯಿಗಳ ಬಗ್ಗೆ ಕಾಳಜಿ ಇದ್ದರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ‘ಅನುಗ್ರಹ’ ಯೋಜನೆಗೆ ಹಣ ಒದಗಿಸಿ ಪಶುಗಳನ್ನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.