ಬೊಮ್ಮಾಯಿ ಅವರೇ ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ : ಸಿದ್ದರಾಮಯ್ಯ Siddaramaiah saaksha tv
ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಮಂಗಳೂರಿನ ಕದ್ರಿಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರಿಗೆ ತ್ರಿಶೂಲ ನೀಡಿದ ವಿಚಾರವಾಗಿ ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ.. ಪೆÇಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬಿಡಿ. ಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ ಕನಸು ನನಸಾಗಬಹುದು. ಒಂದೆಡೆ ಅಮಾಯಕ ಯುವಕ-ಯುವತಿಯರ ಮೇಲೆ ಅನೈತಿಕ ಪೆÇಲೀಸ್‍ಗಿರಿಯ ದೌರ್ಜನ್ಯ. ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ. ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ. ಇದಕ್ಕೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹಿರಂಗ ಬೆಂಬಲ..ರಾಜ್ಯದಲ್ಲಿ ಸರ್ಕಾರ ಇದೆಯೇ?
ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಬೊಮ್ಮಯಿ. ಕರೆಗೆ ಓಗೊಟ್ಟು ಪೆÇಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ ಕಾಡಿನ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ. ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.
ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ. ಇದು ಆಧಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ.
ಬಸವರಾಜ ಬೊಮ್ಮಾಯಿ ಅವರೇ, ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಕುಟುಕಿದ್ದಾರೆ.









