ಬೆಂಗಳೂರು : ಕೊರೊನಾ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಳೇ ಶಿಷ್ಯ ಡಾ.ಕೆ ಸುಧಾಕರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೊರೊನಾ ಸೋಂಕು ನಿರ್ವಹಹಣೆಯ ಜವಾಬ್ದಾರಿಯನ್ನು ಸುಧಾಕರ್ ಬದಲಾಗಿ ಆರ್. ಅಶೋಕ್ ಅವರಿಗೆ ನೀಡಿದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದಲ್ಲಿ ಸಚಿವರುಗಳ ನಡುವೆಯೇ ಸಮನ್ವಯತೆ ಇಲ್ಲ. ಶ್ರೀರಾಮುಲು ಮತ್ತು ಸುಧಾಕರ್ ಇಬ್ಬರಿಗೂ ಸೋಂಕು ನಿರ್ವಹಹಣೆಯ ಜವಾಬ್ದಾರಿ ಕೊಟ್ಟರು. ಈಗ ಸುಧಾಕರ್ ಬಿಟ್ಟು ಅಶೋಶ್ ಗೆ ಕೊಟ್ಟಿದ್ದಾರಂತೆ. ಸುಧಾಕರ್ ನಿಂದ ಕಿತ್ತು ಅಶೋಶ್ ಗೆ ಏಕೆ ಕೊಟ್ಟರು..? ಬೆಸಿಕಲ್ ಸುಧಾಕರ್ ಡಾಕ್ಟರ್, ಪ್ರಾಕ್ಟೀಸ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮೆಡಿಕಲ್ ಬೆಸಿಕ್ ಗೊತ್ತಿರುತ್ತೆ ಎಂದು ಸುಧಾಕರ್ ಪರವಾಗಿ ಮಾತನಾಡಿದರು.
ಇದೇ ವೇಳೆ ಸಿಎಂ ಫಂಡ್ ಗೆ ಬಂದ 290 ಕೋಟಿಯಲ್ಲಿ ಒಂದು ರೂಪಾಯಿಯನ್ನಾದರೂ ಖರ್ಚು ಮಾಡಿದ್ದೀರಾ ಎಂದು ಸಿಎಂ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಲಾಕ್ ಡೌನ್ ಗಿಂತ ಮುಂಚಿತವಾಗಿ ನಮ್ಮ ದೇಶದಲ್ಲಿ ಕಡಿಮೆ ಸೋಂಕಿತ್ತು. ಕಡಿಮೆ ಸೋಂಕು ಇದ್ದಾಗ ನಮಗೆ ಸಿದ್ಧತೆ ಮಾಡಿಕೊಳ್ಳಲು ದೇಶದಲ್ಲಿ ಮತ್ತು ರಾಜ್ಯದಲ್ಲಿ ಸಮಯ ಇತ್ತು. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ತಪ್ಪು ನಿರ್ಧಾರಗಳಿಂದ ಸೋಂಕು ಹೆಚ್ಚಾಗಿದೆ. ಜಗತ್ತಿನಲ್ಲಿ ನಾವು ನಾಲ್ಕನೇ ಸ್ಥಾನದಲ್ಲಿ ಇದ್ದೇವೆ ಎಂದು ವಾಗ್ದಾಳಿ ಮಾಡಿದರು.
ಯಡಿಯೂರಪ್ಪ ಅಸಹಾಯಕರಾಗಿದ್ದಾರೆ. ಮಂತ್ರಿಗಳಲ್ಲಿ ಸಮನ್ವಯತೆ ಇಲ್ಲ. ಇವತ್ತಿನ ತನಕ ಯಾರೊಬ್ಬರಿಗೂ ಪರಿಹಾರ ತಲುಪಿಲ್ಲ. ಕ್ಷೌರಿಕರು, ಆಟೋ ಡ್ರೈವರ್ ಗಳಿಗೆ ಪರಿಹಾರ ತಲುಪಿಲ್ಲ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ. ಇದರಲ್ಲಿ ಎಷ್ಟು ಬೆಡ್..? ವೆಂಟಿಲೇಟರ್ ಎಷ್ಟು..? ಎಷ್ಟರ ಮಟ್ಟಿಗೆ ಚಿಕಿತ್ಸೆಯಾಗಿದೆ..? ಅಂಬ್ಯುಲೆನ್ಸ್ ಎಷ್ಟಿವೆ..? ಎಷ್ಟು ಖರ್ಚು ಮಾಡಿದ್ದೇವೆ ಎಂಬುದರ ಬಗ್ಗೆ ಜನರಿಗೆ ಮಾಹಿತಿ ನೀಡಲಿ ಎಂದು ಒತ್ತಾಯ ಮಾಡಿದರು.








