“ಬಿಜೆಪಿ ಸಂಸದರು ಗುಲಾಮರು, ಮೋದಿ ಬಸ್ ಸ್ಟ್ಯಾಂಡ್, ಅಚ್ಛೆ ದಿನ್ ಅಲ್ಲ ನರಕ”
ಬೆಳಗಾವಿ : ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸ್ಟ್ಯಾಂಡ್ ಇಲ್ಲ. ಅದು ಬಸ್ ಸ್ಟ್ಯಾಂಡ್ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಬೆಳಗಾವಿಯಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಸ್ ಸ್ಟ್ಯಾಂಡ್ ಆಗಿರೋರು ಯಾರಪ್ಪ, ಮಿಸ್ಟರ್ ನರೇಂದ್ರ ಮೋದಿ. ಪ್ರಹ್ಲಾದ್ ಜೋಶಿ ಒಬ್ಬ ಸೈಡ್ ಆಕ್ಟರ್, ಡೈರೆಕ್ಟರ್ ಆರ್ ಎಸ್‍ಎಸ್ ಆಗಿದೆ ಎಂದು ತಮ್ಮದೇ ರೀತಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆ ಕೇಂದ್ರ ಸರ್ಕಾರದ ವೈಫಲ್ಯವಾಗಿದೆ. ರೈತ ವಿರೋಧಿ ಕಾನೂನು ತಂದಿದ್ದಾರೆ. ಬೆಲೆ ಏರಿಕೆ ನಿಯಂತ್ರಣ ಇಲ್ಲ, ಅಚ್ಛೆ ದಿನ್ ಇಲ್ಲ ನರಕ ಆಗಿಬಿಟ್ಟಿದೆ.
ಕಾಂಗ್ರೆಸ್ ಪಕ್ಷ ಯಾವುದೇ ಜಾತಿಗೆ ಸೀಮಿತವಾದ ಪಾರ್ಟಿ ಅಲ್ಲ. ಎಲ್ಲಾ ಜಾತಿಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪಕ್ಷ ಕಾಂಗ್ರೆಸ್ ಆಗಿದೆ. ಸತೀಶ್ ಜಾರಕಿಹೊಳಿ ಬಹಳ ಒಳ್ಳೆಯ, ಸಮರ್ಥ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.
ಇನ್ನು ರಾಜ್ಯದ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಗುಲಾಮರಂತೆ ವರ್ತನೆ ಮಾಡುತ್ತಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯವಾಗಿದೆ. ಈ ಬಗ್ಗೆ ರಾಜ್ಯದ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ.
ಈ ಎಲ್ಲಾ ಸಂಸದರಿಗೆ ಬೆಳಗಾವಿ ಚುನಾವಣೆ ಮೂಲಕ ಜನರು ಪಾಠ ಕಲಿಸಲಿದ್ದಾರೆ. ಯಡಿಯೂರಪ್ಪ ಸರ್ಕಾರ ಸಹ ಹೇಡಿ ಸರ್ಕಾರವಾಗಿದೆ ಎಂದು ಸಿದ್ದರಾಮಯ್ಯ ಗುಡುಗಿದರು.
