Siddaramaiah – ಬಿಜೆಪಿ ಅವರಿಗೆ ಎಷ್ಟು ನಾಲಿಗೆಗಳು : ಸಿದ್ದು ಪ್ರಶ್ನೆ
ಬೆಂಗಳೂರು : ಟ್ವಿಟ್ಟರ್ ವೇದಿಕೆಯಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರ ಮತ್ತು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದು, ಬಿಜೆಪಿ ಅವರಿಗೆ ಎಷ್ಟು ನಾಲಿಗೆಗಳು ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಸಿದ್ದರಾಮಯ್ಯ…
ಉತ್ತರ ಕನ್ನಡದಲ್ಲಿ ಪರೇಶ್ ಮೇಸ್ತಾ ಸಾವಿಗೀಡಾದಾಗ ಬಿಜೆಪಿಯವರ ಒತ್ತಡಕ್ಕಾಗಿ ತಕ್ಷಣ ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದೆ. ಈಗ ಸಿಬಿಐ ಬಿ ರಿಪೋರ್ಟ್ ನೀಡಿದರೆ ಅದಕ್ಕೆ ಸಿದ್ದರಾಮಯ್ಯ ಸರ್ಕಾರ ಸಾಕ್ಷ್ಯ ನಾಶ ಮಾಡಿದ್ದು ಕಾರಣ ಎಂದು ಬಿಜೆಪಿ ಅವರು ಹೇಳುತ್ತಿರುವುದು ನಾಚಿಕೆಗೇಡು.
ಸಿಬಿಐ ಸಂಸ್ಥೆ ಗೃಹಸಚಿವ ಅಮಿತ್ ಶಾ ಅವರ ಅಧೀನದಲ್ಲಿ ಇರುವುದಲ್ವಾ? ಪ್ರಕರಣದ ಸಾಕ್ಷಿ ನಾಶ ಆಗಿ, ಸರಿಯಾದ ರೀತಿ ತನಿಖೆ ಆಗಿಲ್ಲ ಎಂದರೆ ಅಮಿತ್ ಶಾ ಅವರು ಅಸಮರ್ಥರು ಎಂದಲ್ವ? ಈಗ ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕನನ್ನೇ ದೂರಿದಂಗೆ ಆಗಲ್ವಾ ಎಂದು ಪ್ರಶ್ನಿಸಿದ್ದಾರೆ.

ಸಿಬಿಐ ಅವರು ಬಿ ರಿಪೋರ್ಟ್ ಹಾಕಿದ್ರೆ ಸಾಕ್ಷ್ಯ ನಾಶ ಮಾಡಿದ್ರು ಎನ್ನುತ್ತಾರೆ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್ ಹಾಕಿದರೆ ಕ್ಷೀನ್ ಚಿಟ್ ಕೊಟ್ಟಿದ್ದಾರೆ ಎನ್ನುತ್ತಾರೆ. ಬಿಜೆಪಿ ಅವರಿಗೆ ಎಷ್ಟು ನಾಲಿಗೆಗಳು ಎಂದು ಪ್ರಶ್ನಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಗಾಗಿ ರಾಜೀವ್ ಗಾಂಧಿ ಸರ್ಕಾರ ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ಮಾಡಿದ್ದು. ಅದನ್ನು ಜಾರಿಗೆ ತಂದದ್ದು ಪಿ.ವಿ.ನರಸಿಂಹರಾವ್ ಸರ್ಕಾರ. ಇದನ್ನು ವಿರೋಧ ಮಾಡಿದ್ದವರು ಬಿಜೆಪಿ ಪಕ್ಷದ ರಾಮಾ ಜೋಯಿಸ್.
ಸ್ಥಳೀಯ ಸಂಸ್ಥೆಗಳ ರಾಜಕೀಯ ಮೀಸಲಾತಿ ಅಸಂವಿಧಾನಿಕ ಎಂದು ಬಿಜೆಪಿ ರಾಜ್ಯ ಸಭಾ ಸದಸ್ಯ ರಾಮಾ ಜೋಯಿಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾಗ ಬಸವರಾಜ ಬೊಮ್ಮಾಯಿ ಎಲ್ಲಿದ್ದರು? ಮುಖ್ಯಮಂತ್ರಿಗಳು ಮಾತನಾಡುವ ಮೊದಲು ಇತಿಹಾಸ ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.