Siddaramaiah : ಬೊಮ್ಮಾಯಿ, ಮೋದಿಯವರ ಮನೆ ಮುಂದೆ ನಾಯಿ ಮರಿ ತರಹ ಇರ್ತಾರೆ…
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನ ನಾಯಿ ಮರಿಗೆ ಹೋಲಿಕೆ ಮಾಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಗರಿಬೊಮ್ಮನಹಳ್ಳಿಯಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಮಾಲವಿ ಜಲಾಶಯದ ವಿಜಯೋತ್ಸವ ಹಾಗೂ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದಾರೆ.
ಕಾಂಗ್ರೆಸ್ಸಿನವರ ದಮ್ಮು, ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಾಯಿ ಮರಿ ತರಹ ಮಾಡುತ್ತಾರೆ. ಗಡಗಡ ಎಂದು ನಡುಗುತ್ತಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
15ನೇ ಹಣಕಾಸಿನ ಆಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ₹5,495 ಕೋಟಿ ವಿಶೇಷ ಅನುದಾನ ಕೇಂದ್ರ ಸರ್ಕಾರ ಕೊಡಬೇಕೆಂದು ಶಿಫಾರಸು ಮಾಡಲಾಗಿದೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರು ಅನುದಾನ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ‘ಆಪರೇಷನ್ ಕಮಲ’ದ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಆ ಅನುದಾನ ತರುವ ತಾಕತ್ತು, ದಮ್ಮು ಇದೆಯೇ? ರಾಜ್ಯದ ಅನೇಕ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರ ಅನುದಾನ ಕೊಡುತ್ತಿಲ್ಲ. ರಾಜ್ಯವನ್ನು ಪ್ರತಿನಿಧಿಸುವ 25 ಜನ ಸಂಸದರಿದ್ದರೂ ಏನೂ ಆಗುತ್ತಿಲ್ಲ ಎಂದರು.
Siddaramaiah: Bommai stands like a puppy in front of Modi’s house…








