ಇನ್ನು ಸ್ವಲ್ಪ ದಿನ ಯಡಿಯೂರಪ್ಪನವರೇ ಸಿಎಂ : ಸಿದ್ದರಾಮಯ್ಯ
ಮೈಸೂರು : ಬಿ.ಎಸ್.ಯಡಿಯೂರಪ್ಪನವರು ಇನ್ನೂ ಸ್ವಲ್ಪ ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಸಂಪುಟ ವಿಸ್ತರಣೆ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಸಂಪುಟ ವಿಸ್ತರಣೆ ಆಗಿರೋದನ್ನ ನೋಡಿದ್ರೆ ಇನ್ನೂ ಸ್ವಲ್ಪ ದಿನ ಯಡಿಯೂರಪ್ಪನವರೇ ಸಿಎಂ ಆಗಿರಬಹುದು.
ಶಕ್ತಿ ಕಳೆದುಕೊಂಡ ರಾಜಾಹುಲಿ : ಡಮ್ಮಿಯಾದ್ರಾ ಬಿಎಸ್ ವೈ
ಬಹುಶಃ ಯಡಿಯೂರಪ್ಪನವರು ಸಂಪುಟ ವಿಸ್ತರಣೆ ಆದ ನಂತರ ರಾಜೀನಾಮೆ ಕೊಡ್ತೀನಿ ಅಂತ ಹೇಳಿರಬಹುದು. ಹಾಗಾಗಿ ಇನ್ನೂ ಸ್ವಲ್ಪ ದಿನ ಅವರೇ ಸಿಎಂಯಾಗಿ ಉಳಿಯುವ ಸಾಧ್ಯತೆ ಇದೆ ಎಂದಿದ್ದಾರೆ.
ಇದೇ ವೇಳೆ ಬಜೆಟ್ ವಿಚಾರವಾಗಿ ಮಾತನಾಡಿ, ಸದ್ಯ ಯಡಿಯೂರಪ್ಪನವರು ಬಜೆಟ್ ಮಂಡಿಸಲೇಬೇಕು. ಇಲ್ಲವಾದ್ರೆ ಮಾರ್ಚ್ ನಂತ್ರ ಒಂದು ರೂಪಾಯಿಯೂ ಖರ್ಚು ಮಾಡುವುದಕ್ಕೆ ಅವರಿಗೆ ಸಾಧ್ಯವಾಗುವುದಿಲ್ಲ.
ನನ್ನ ಬಜೆಟ್ ಸ್ಟೈಲ್ ಬೇರೆ ಇತ್ತು. ಇವರ ಬಜೆಟ್ ಸ್ಟೈಲ್ ಬೇರೆ ಇದೆ, ಏನ್ ಮಾಡ್ತಾರೋ ನೋಡೋಣ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









