ಜಾಮೀನನ ಮೇಲೆ ಹೊರಗಿರೋ ಬಿಎಸ್ ವೈ ಸಿಎಂ ಆಗಿರೋದು ಸರಿಯೇ
ಬೆಂಗಳೂರು : ಡಿನೋಟಿಫಿಕೇಷನ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲೆನ ಚರ್ಚೆಯಲ್ಲಿ ಮಾತನಾಡುತ್ತಾ ಡಿನೋಟಿಫಿಕೇಷನ್ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮುರುಗೇಶ್ ನಿರಾಣಿ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣದ ಆರೋಪಗಳಿವೆ. ಈ ಸಂಬಂಧ ಹೈಕೋರ್ಟ್ ತೀರ್ಪನ್ನ ವಜಾ ಮಾಡುವಂತೆ ಸುಪ್ರೀಂ ಕೋರ್ಟ್ ಗೆ ಇಬ್ಬರು ಹೋಗಿದ್ದಾರೆ. ಆದ್ರೆ ಅಲ್ಲಿ ಅವರಿಗೆ ಹಿನ್ನಡೆಯಾಗಿದೆ. ಸುಪ್ರೀಂ ಕೋರ್ಟ್ ಇಬ್ಬರ ಅರ್ಜಿಯನ್ನ ತಿರಸ್ಕರಿಸಿದೆ.
ಹೀಗಾಗಿ ನಾಳೆ ಅವರ ಬಂಧನವಾಗಬಹುದು. ಹಾಗಾಗದಂತೆ ಸುಪ್ರೀಂಕೋರ್ಟ್ ನೀಡಿದ್ದರೂ ಇದರ ಆಧಾರದ ಮೇಲೆ ಹೊರಗಿರುವ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಆಗ ಮಧ್ಯೆ ಪ್ರವೇಶಿಸಿ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ, ಸಿದ್ದರಾಮಯಯ್ಯ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಶಾಸಕರಾದ ಬೋಪಯ್ಯ ದನಿಗೂಡಿಸಿದರು. ಈ ಹಂತದಲ್ಲಿ ಸಿದ್ದರಾಮಯ್ಯ ಬೆಂಬಲಕ್ಕೆ ರಮೇಶ್ ಕುಮಾರ್ ಧಾವಿಸಿ, ಸಿದ್ದರಾಮಯ್ಯ ಹೇಳಿಕೆಗಳನ್ನ ಸಮರ್ಥಿಸಿಕೊಂಡರು.
ಬಳಿಕ ಭಾಷಣ ಮುಂದುವರಿಸಿದ ಸಿದ್ದರಾಮಯ್ಯ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು, ಮಂತ್ರಿಗಳಿದ್ದಾರೆ. ಹೀಗಾಗಿ ಇವರು ಮುಂದುವರಿಯುವುದು ನೈತಿಕವಲ್ಲ ಎಂದು ಜನ ಹೇಳುತ್ತಾರೆ. ಹೀಗಾಗಿ ಅದನ್ನು ಪ್ರಸ್ತಾಪಿಸಿದ್ದೇನೆ ಎಂದು ಹೇಳಿ ಮುಂದುವರಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel