ಬೆಂಗಳೂರು : ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ.
ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.— B.S.Yediyurappa (@BSYBJP) April 25, 2020
”ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ. ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸಾಮಾಜಿಕ ಹೋರಾಟಗಾರ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.
ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವ ನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು.
ಅವರ ದು:ಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/wcmKL4rdag— Siddaramaiah (@siddaramaiah) April 25, 2020
ಬಿಎಸ್ ವೈ ಟ್ವೀಟ್ ನಲ್ಲಿ..ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.








