ತಾಕತ್ತಿದ್ದರೇ ಗೋಮಾಂಸ ರಫ್ತು ನಿಷೇಧಿಸಿ : ಬಿಜೆಪಿಗೆ ಸಿದ್ದರಾಮಯ್ಯ ಸವಾಲ್
ಬೆಂಗಳೂರು : ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಸವಾಲ್ ಹಾಕಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಬಿಜೆಪಿ ನಾಯಕರಿಗೆ ಎಂದು ಟೀಕಿಸಿದ್ದಾರೆ.
ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ.
ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿಬರ್ಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ ಎಂದು ಕಿಡಿಕಾರಿದರು.
ಬ್ರಿಟನ್ ಕೊರೊನಾ ಸೋಂಕಿತರಿಗೆ ವಿಕ್ಟೋರಿಯಾದಲ್ಲಿ ಪ್ರತ್ಯೇಕ ವಾರ್ಡ್
ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ.
ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಸವಾಲ್ ಹಾಕಿದರು.
ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ ಎಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










