Siddramaiah | ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗೋದು ಒಳಿತು
ಬೆಂಗಳೂರು : ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ರಾಜ್ಯದ ಹಿತಾಸಕ್ತಿ ಮತ್ತು ಜನರ ಭವಿಷ್ಯದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಪರಿಸ್ಥಿತಿ ಇನ್ನಷ್ಟು ವಿಕೋಪಕ್ಕೆ ಹೋಗುವ ಮುನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮನೆಗೆ ಹೋಗುವುದು ಒಳಿತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅಜಾನ್ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದು, ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಾಜದ ಕೋಮು ಸಾಮರಸ್ಯ ಕದಡುವಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಾ, ಆ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ.ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ.
ದಿನೇ ದಿನೆ ರಾಜ್ಯದಲ್ಲಿ ಇಷ್ಟೊಂದು ಅಶಾಂತಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಈ ಬಗ್ಗೆ ಮಾತನಾಡದ ಮುಖ್ಯಮಂತ್ರಿ @BSBommai ಅವರದು ಈ ಎಲ್ಲಾ ಸಮಾಜ ವಿರೋಧಿ ಕೃತ್ಯಗಳಿಗೆ ಸಹಮತವೋ ಅಥವಾ ಕಾನೂನು ಕ್ರಮ ಜರುಗಿಸಲಾಗದ ಅಸಹಾಯಕತೆಯೋ? 3/4#ಸೌಹಾರ್ದತೆ
— Siddaramaiah (@siddaramaiah) April 5, 2022
ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು?ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದುಬೀಳುತ್ತಿದ್ದರೂ, ಅದಕ್ಕೆ ಕಾರಣವಾದ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸಮರ್ಥರೇ?
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ @BJP4Karnataka ಸರ್ಕಾರ ಸಮಾಜದ ಕೋಮು ಸಾಮರಸ್ಯ ಕದಡುವಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಾ, ಆ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ.
ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ. 1/4#ಸೌಹಾರ್ದತೆ
— Siddaramaiah (@siddaramaiah) April 5, 2022
ದಿನೇ ದಿನೆ ರಾಜ್ಯದಲ್ಲಿ ಇಷ್ಟೊಂದು ಅಶಾಂತಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಈ ಬಗ್ಗೆ ಮಾತನಾಡದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರದು ಈ ಎಲ್ಲಾ ಸಮಾಜ ವಿರೋಧಿ ಕೃತ್ಯಗಳಿಗೆ ಸಹಮತವೋ ಅಥವಾ ಕಾನೂನು ಕ್ರಮ ಜರುಗಿಸಲಾಗದ ಅಸಹಾಯಕತೆಯೋ ಎಂದು ವ್ಯಂಗ್ಯವಾಡಿದ್ದಾರೆ. Siddaramaiah Condemns ‘Ban Of Loudspeakers In Mosques’ Campaign








