ಕನ್ನಡ ಬಳಕೆ ಕಡ್ಡಾಯವಲ್ಲ : ಗೃಹ ಸಚಿವಾಲಯದ ವಿರುದ್ಧ ಸಿದ್ದು ಗರಂ
ಕನ್ನಡ ಬಳಕೆಗೆ ಅಡ್ಡಿಯಾಗುವ ಕಾನೂನುಗಳನ್ನ ಕಿತ್ತೆಸೆಯಿರಿ : ಸಿದ್ದರಾಮಯ್ಯ
ಬೆಂಗಳೂರು : ಕರ್ನಾಟಕದಲ್ಲಿ ಕನ್ನಡ ಬಳಕೆಗೆ ಕಾನೂನು-ನಿಯಮಗಳು ಅಡ್ಡಬರುತ್ತದೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಕಚೇರಿಗಳು ಕರ್ನಾಟಕದಲ್ಲೂ ಕನ್ನಡ ಬಳಸಬೇಕಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಈ ಬಗ್ಗೆ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕನ್ನಡ ಬಳಕೆಗೆ ಕಾನೂನು-ನಿಯಮಗಳು ಅಡ್ಡಬರುತ್ತದೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು.
ಕರ್ನಾಟಕದಲ್ಲಿ ನಡೆಯುವ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂದು ಒತ್ತಾಯಿಸಿದ್ದಾರೆ.
ಕನ್ನಡ ಬಳಕೆ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಖಂಡನೀಯ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಬೇಕು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಕ್ಷಣ ಕೇಂದ್ರಕ್ಕೆ ಪತ್ರ ಬರೆದು ಈ ಬಗ್ಗೆ ವಿವರಣೆ ಪಡೆದು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel