ಪ್ರಳಯ ಆದರೂ ಆ 14 ಜನರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ : ಸಿದ್ದರಾಮಯ್ಯ
ಬೆಂಗಳೂರು : ಪಕ್ಷಕ್ಕೆ ಮೋಸ ಮಾಡಿ ಹೋದ 14 ಜನರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ. ಈ ಬಗ್ಗೆ ನಾನು ಈ ಹಿಂದೆ ಸ್ಪಷ್ಟಪಡಿಸಿದ್ದೇನೆ. ಪ್ರಳಯ ಆದರೂ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಾಯಕತ್ವ, ಸಿದ್ದಾಂತ ಒಪ್ಪಿ ಯಾರಾದರೂ ಪಕ್ಷಕ್ಕೆ ಬರಬಹುದು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾನು ಡಿ.ಕೆ. ಶಿವಕುಮಾರ್ ಜೊತೆ ಮಾತನಾಡುತ್ತೇನೆ.
ಅವರು ಹೇಳಿದ್ದು ಯಾರು ಬೇಕಾದರೂ ಬರಬಹುದು ಎಂದು 14 ಜನರ ಬಗ್ಗೆ ಹೇಳಿಕೆ ನೀಡಿಲ್ಲ. ಪಕ್ಷಕ್ಕೆ ಮೋಸ ಮಾಡಿ ಹೋದ 14 ಜನರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ.
ಈ ಬಗ್ಗೆ ನಾನು ಈ ಹಿಂದೆ ಸ್ಪಷ್ಟಪಡಿಸಿದ್ದೇನೆ. ಪ್ರಳಯ ಆದರೂ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಸದನದಲ್ಲಿ ನಡೆದ ಕಲಾಪದ ವೇಳೆ ಕೂಡ ಹೇಳಿದ್ದೇನೆ ಎಂದರು.
ಡಿ.ಕೆ. ಶಿವಕುಮಾರ್ ಅವರು ಹೇಳಿದ್ದು ಆ ಅರ್ಥದಲ್ಲಿ ಅಲ್ಲ. ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರಲು ಇಚ್ಛಿಸಿದವರು ಅರ್ಜಿ ಹಾಕಿದರೆ ಪರಿಶೀಲಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರಷ್ಟೇ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.