ರಾಜ್ಯದಾದ್ಯಂತ ಭ್ರಷ್ಟಾಚಾರದ ವಾಸನೆ |ಸರ್ಕಾರ ವಜಾಗೆ ಸಿದ್ದು ಆಗ್ರಹ SIddaramaiah
ಬೆಂಗಳೂರು : ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡೆಯುತ್ತಿದೆ. ನಿಷ್ಕ್ರಿಯ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಆರಂಭವಾಗಿದೆ, ಭ್ರಷ್ಟಾಚಾರ ವ್ಯಾಪಕವಾಗಿದೆ.
ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಒಂದೆಡೆ ಬಿಜೆಪಿ ನಾಯಕರು ಕುರ್ಚಿಗಾಗಿ ಕಿತ್ತಾಡುತ್ತಿದ್ದಾರೆ. ಇನ್ನೊಂದೆಡೆ ಸ್ವತಃ ಬಿಜೆಪಿ ನಾಯಕರೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಆರೋಪ ಮಾಡುತ್ತಿದ್ದಾರೆ.
ರಾಜ್ಯಾದ್ಯಂತ ಭ್ರಷ್ಟಾಚಾರದ ವಾಸನೆ ಹೊಡೆಯುತ್ತಿದೆ. ನಿಷ್ಕ್ರಿಯ ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರು ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಫೋನ್ ಟ್ಯಾಪಿಂಗ್ ಬಗ್ಗೆ ಮಾತನಾಡಿ, ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ತಮ್ಮ ಫೆÇೀನ್ ಕದ್ದಾಲಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.