ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೆಬೆಲ್ ಆಗಿದ್ದ ಶಾಸಕರಿಗೆ ವಿಶೇಷ ಹುದ್ದೆಗಳನ್ನು ಸೃಷ್ಟಿ ಮಾಡಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿ ಪಕ್ಷಕ್ಕೆ ಮುಜುಗುರವಾಗುವಂತೆ ಮಾಡುತ್ತಿದ್ದ ಮೂವರಿಗೆ ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ.
ಕೊಪ್ಪಳ ಜಿಲ್ಲೆಯ ಉಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ್ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗೆ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿದರೆ, ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ರಿಗೆ ಸಿಎಂ ಸಲಹೆಗಾರ ಹುದ್ದೆ ನೀಡಲಾಗಿದೆ. ಹಳಿಯಾಳ ಶಾಸಕ ಆರ್.ವಿ ದೇಶಪಾಂಡೆಗೆ ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಹುದ್ದೆ ನೀಡಲಾಗಿದೆ. ಅಲ್ಲದೇ, ಮೂವರಿಗೆ ಸಚಿವ ಸಂಪುಟದ ದರ್ಜೆ ನೀಡಲಾಗಿದೆ.








