ಸಿದ್ದರಾಮಯ್ಯ ಭಾಷಣದ ವೇಳೆ `ಡಿಕೆಶಿ’ ಘೋಷಣೆ : ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ

1 min read
bs yeddyurappa

ಸಿದ್ದರಾಮಯ್ಯ ಭಾಷಣದ ವೇಳೆ `ಡಿಕೆಶಿ’ ಘೋಷಣೆ : ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ

ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆಯಲ್ಲಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಡಿಕೆಶಿ.. ಡಿಕೆಶಿ ಎಂದು ಘೋಷಣೆ ಕೂಗಿದರು.

ಈ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಬಗ್ಗೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.

ಬಿಜೆಪಿ ಟ್ವೀಟ್ ನಲ್ಲಿ…

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ “ಡಿಕೆ ಡಿಕೆ” ಎಂಬ ಘೋಷಣೆ. ಅಲ್ಲಿಗೆ ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‍ನಲ್ಲಿ ಇದು ಸಾಮಾನ್ಯವಲ್ಲವೇ?

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿಪೂಜೆ ಬೇಡ, ಪಕ್ಷಪೂಜೆ ಮಾತ್ರ ಸಾಕು ಎಂದು ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ಸೂಚನೆ ನೀಡಿದ್ದಾರೆ. ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ #ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ?

Siddaramaiah saaksha tv

ಸಿದ್ದರಾಮಯ್ಯನವರೇ, ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ. ಟಿಪ್ಪು ಜಯಂತಿ ನಡೆಸಿದಿರಿ. ಶಾದಿ ಭಾಗ್ಯ ಕೊಟ್ಟಿರಿ. ಆದರೆ ಫಲವೇನು? ಅಲ್ಪಸಂಖ್ಯಾತರ ಸಮಾವೇಶದಲ್ಲಿ ನಿಮ್ಮ ಜೊತೆ ಅಲ್ಪಸಂಖ್ಯಾತ ಸಮುದಾಯದವರೇ ಇರಲಿಲ್ಲ. ಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಡಿಕೆ ಡಿಕೆ ಎನ್ನುತ್ತಿದ್ದಾರೆ ಎಂದು ಬಿಜೆಪಿ ಘಟಕ ಕುಟುಕಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd