ನಾನೆಲ್ಲೂ ಸಿಎಂ ಆಗ್ತೀನಿ ಅಂತ ಹೇಳಿಲ್ಲ : ಸಿದ್ದರಾಮಯ್ಯ
ಬಳ್ಳಾರಿ : ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ನಾನೆಲ್ಲೂ ಸಿಎಂ ಆಗ್ತೀನಿ ಅಂತ ಹೇಳಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಮುಂದಿನ ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದು, ಈ ಬಗ್ಗೆ ಸಂಡೂರು ತಾಲೂಕಿನ ತೋರಣಗಲ್ಲಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟದ್ದು.
ನನ್ನನ್ನು ಸಿಎಂ ಮಾಡುವ ಅಭಿಪ್ರಾಯವನ್ನು ನಮ್ಮ ಪಕ್ಷದ ಶಾಸಕರು ಹೇಳುತ್ತಿದ್ದಾರಷ್ಟೇ.. ನಾನೆಲ್ಲಾದರೂ ಸಿಎಂ ಆಗ್ತೀನಿ ಅಂತ ಹೇಳಿದ್ದೀನಾ ಎಂದು ಪ್ರಶ್ನಿಸಿದರು.
ನಾನೆಲ್ಲೂ ಸಿಎಂ ಆಗ್ತೀನಿ ಅಂತ ಹೇಳಿಲ್ಲ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬರಬೇಕು. ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಬೇಕು.
ಆಗ ಮಾತ್ರ ಸಿಎಂ ಯಾರು ಅಂತ ಘೋಷಣೆಯಾಗಲಿದೆ. ಅಲ್ಲಿಯ ತನಕ ಸಿಎಂ ಅಭ್ಯರ್ಥಿ ಘೋಷಣೆ ಅಪ್ರಸ್ತುತ ಎಂದರು.
ಇದೇ ವೇಳೆ ಮಾಜಿ ಸಚಿವ ರಮೇಶ ಜಾರಕಿಹೊಳಿಯನ್ನ ರಾಜ್ಯ ಸರ್ಕಾರ ರಕ್ಷಿಸುತ್ತಿದೆ. ಕಾನೂನು ಎಲ್ಲರಿಗೂ ಒಂದೇ. ಮಾಜಿ ಸಚಿವರಿಗೊಂದು ನ್ಯಾಯ, ಸಾಮಾನ್ಯರಿಗೊಂದು ನ್ಯಾಯ ಇರುತ್ತದೆಯೋ? ಎಂದು ಸಿಡಿ ಕೇಸ್ ವಿಚಾರವಾಗಿ ಸರ್ಕಾರದ ವಿರುದ್ಧ ಕಿಡಿಕಾರಿದರು.