ಮಣಿಪಾಲ್ ಆಸ್ಪತ್ರೆಯಿಂದ ಸಿದ್ದರಾಮಯ್ಯ ಡಿಸ್ಚಾರ್ಜ್ Siddaramaiah
ಬೆಂಗಳೂರು : ಜ್ವರದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನೆಲೆ ಕಳೆದ ಮಂಗಳವಾರ ಬೆಳಗ್ಗೆ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಿಂದ ಹೊರಟ ಅವರನ್ನು ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು. ಇವರೊಂದಿಗೆ ಪುತ್ರ ಹಾಗೂ ಶಾಸಕ ಡಾ. ಯತೀಂದ್ರ ಇದ್ದರು.
ಜ್ವರದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಮೂರು ಬಾರಿ ಕೋವಿಡ್ ತಪಾಸಣೆ ಮಾಡಲಾಗಿತ್ತು.